ಬಳ್ಳಾರಿ: ಜಿಲ್ಲಾಡಳಿತ ಕಚೇರಿಗಳಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
Bellary: 77th Republic Day celebrations at district administration offices
ಬಳ್ಳಾರಿ 27: ನಗರದ ಡಾ.ರಾಜ್‌ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನ ಮತ್ತು ರೈಲ್ವೇ ನಿಲ್ದಾಣ ರಸ್ತೆಯ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು 77ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಎರಡು ಕಚೇರಿಗಳ ಆವರಣದಲ್ಲಿ ಧ್ವಜಾರೋಹಣಾ ನೆರವೇರಿಸಿ, ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಎಲ್ಲರಿಗೂ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಷಯ ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ತಹಶೀಲ್ದಾರ ಟಿ.ರೇಖಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 