ಬಳ್ಳಾರಿ 10: ಕಳೆದ ಸಂಸತ್ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸಿ ವಿಜೇತರಾದ ವೈ.ದೇವೇಂದ್ರಪ್ಪ ಅವರಿಗೆ ಪಕ್ಷದಿಂದ ಜೂ.10ರಂದು ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಹರಗೌಡ, ನಗರ ಘಟಕದ ಅಧ್ಯಕ್ಷ ಶ್ರೀನಿವಾಸ್ ಮೋತ್ಕರ್, ಬಿಜೆಪಿ ಮುಖಂಡರಾದ ವೀರಶೇಖರ್ ರೆಡ್ಡಿ ಅವರು ವೈ.ದೇವೇಂದ್ರಪ್ಪ ಅಭಿನಂದನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಜಗಧೀಶ್ ಶೆಟ್ಟರ್, ಬಳ್ಳಾರಿ ಜಿಲ್ಲಾ ಚುನಾವಣಾ ಉಸ್ತುವಾರಿಗಳೂ ಆಗಿದ್ದ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು, ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ಎನ್ವೈ ಗೋಪಾಲಕೃಷ್ಣ, ಎಂಎಸ್ ಸೋಮಲಿಂಗಪ್ಪ, ಜಿಲ್ಲಾ ಚುನಾವಣಾ ಸಂಚಾಲಕ ಮೃತ್ಯುಂಜಯ ಜಿನಗಾ, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ಧಾರೆ.
ರಾಷ್ಟ್ರೀಯ ಪರಿಷತ್ ಸದಸ್ಯರು, ರಾಜ್ಯ ಪರಿಷತ್ ಸದಸ್ಯರು, ರಾಜ್ಯದ ಪ್ರಮುಖ ನಾಯಕರೂ ಸಹ ಪಾಲ್ಗೊಳ್ಳಲಿದ್ದಾರೆ. ಎಲ್ಲ ಬಿಜೆಪಿ ಕಾರ್ಯಕರ್ತರು ಈ ಅಭಿನಂದನಾ ಸಮಾವೇಶಕ್ಕೆ ಆಗಮಿಸಬೇಕೆಂದು ಕೋರಿದ್ದಾರೆ.