ಲೋಕದರ್ಶನ ವರದಿ
ಬಳ್ಳಾರಿ 19: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭದಿಂದಲೂ ತುಂಬಾ ಗೊಂದಲಗಳಿಂದ ಕೂಡಿರುವುದು, ಸಾರ್ವಜನಿಕ ವಲಯದಿಂದ ಕೇಳಿ ಬಂದಿರುತ್ತದೆ. ಈಗಾಗಲೇ ಪ್ರೊ.ಸುಭಾಷ್ರವರು ಬೋಧಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಗಿಸಿದ್ದಾರೆ.
ಈ ನೇಮಕಾತಿಯಲ್ಲಿ ಭ್ರಷ್ಟಾಚಾರವಾಗಿರುವುದು, ರೋಸ್ಟರ್ ಪದ್ಧತಿ ಉಲ್ಲಂಘನೆಯಾಗಿರುವುದು, ಘನ ಸಹಾಯ ಆಯೋಗದ ನೀತಿ ನಿಯಮಗಳು ಉಲ್ಲಂಘನೆಯಾಗಿರುವುದು ಕಂಡುಬಂದಿದ್ದು, ಸಾರ್ವಜನಿಕ ವಲಯದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ ಆದ್ದರಿಂದ ವ್ಯಾಪಕವಾದ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಘನವೆತ್ತ ನಿವೃತ್ತ ನ್ಯಾಯಾಧೀಶರಿಂದ ತನಿಖಾ ಸಮಿತಿ ರಚಿಸಿ ತನಿಖೆಗೆ ಒಳಪಡಿಸಬೇಕೆಂದು ಕುಲಪತಿಗಳು ಸರ್ಕಾರಕ್ಕೆ ಆಗ್ರಹಪಡಿಸಬೇಕು.
ಹಾಗೆಯೇ ಬೋಧಕೇತರ ಹುದ್ದೆಗಳ ನೇಮಕಾತಿಯಲ್ಲಿ ಪ್ರವೇಶ ಪತ್ರ ವಿಳಂಬ ಮತ್ತು ಪ್ರಶ್ನೆ ಪತ್ರಿಕೆಯಲ್ಲಿ ತುಂಬಾ ಗೊಂದಲಗಳಿರುವುದು ಹಾಗೂ ಸಾರ್ವಜನಿಕ ವಲಯದಲ್ಲಿ ತುಂಬಾ ಅಪಸ್ವರದ ಮಾತುಗಳು ಕೇಳಿ ಬಂದಿರುತ್ತವೆ. ಕೂಡಲೇ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಮರು ಪರೀಕ್ಷೆ ಪ್ರಕ್ರಿಯೆಯನ್ನು ಕುಲಪತಿಗಳು ಮಾಡಬೇಕೆಂದು ತಮ್ಮಲ್ಲಿ ಮನವಿ. ಇದೇ ಪ್ರಕ್ರಿಯೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆಯನ್ನು ಮಾಡಬೇಕಾಗುತ್ತದೆ ಎಂದು ಎ.ಬಿ.ವಿ.ಪಿ. ಆಗ್ರಹಿಸುತ್ತದೆ. ಬೋದಕೇತರ ಹುದ್ದೆಗೆ ನಡೆಸಿದ ಪ್ರಶ್ನೆ ಪತ್ರಿಕೆಯ ಪ್ರತಿಗಳನ್ನು ಲಗತ್ತಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದಶರ್ಿ ಯುವರಾಜ, ರಾಜ್ಯ ಕಾರ್ಯಕಾರಣಿ ಸದಸ್ಯ ಕೌಶಿಕ್, ಹೇಮರೆಡ್ಡಿ, ರುದ್ರಪ್ಪ, ವಿಶ್ವವಿದ್ಯಾಲಯ ಹೋರಾಟ ಸಮಿತಿಯ ಅಡವಿಸ್ವಾಮಿ, ಮಲ್ಲೇಶ್ ಕುಮಾರ್ ಹಾಜರಿದ್ದರು.