ಬಳ್ಳಾರಿ: ಕಂದಾಯ ಪ್ರಗತಿ ಪರೀಶೀಲನಾ ಸಭೆಹಕ್ಕುಪತ್ರ ಸೌಲಭ್ಯ ತಲುಪಿಸಿ: ಆಯುಕ್ತೆ ಜಹೀರಾ ನಾಸೀಮ್
Bellary: Revenue progress review meeting, provide copyright facility: Commissioner Zaheera Naseem
ಬಳ್ಳಾರಿ 12 : ರಾಜ್ಯ ಸರ್ಕಾರವು ಬಡವರಿಗೆ ಮನೆ ಮತ್ತು ಜಮೀನಿನ ಮಾಲೀಕತ್ವದ ಕಾನೂನುಬದ್ಧ ಹಕ್ಕು ನೀಡುವ ಪ್ರಮುಖ ಕಾರ್ಯಕ್ರಮವಾದ ಹಕ್ಕುಪತ್ರ ಸೌಲಭ್ಯವನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಾಸೀಮ್ ಅವರು ಹೇಳಿದರು. ಗುರುವಾರ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಭೂ ಮಾಲೀಕತ್ವವಿಲ್ಲದ ಬಡವರಿಗೆ, ಪ್ರಮುಖವಾಗಿ ಕಂದಾಯ ಗ್ರಾಮಗಳಲ್ಲಿ ಭೂಮಿಯ ಹಕ್ಕನ್ನು ನೀಡುವುದು ಸರ್ಕಾರದ ಧ್ಯೇಯೋದ್ದೇಶವಾಗಿದೆ. ಹಾಗಾಗಿ ಜಿಲ್ಲೆಯಲ್ಲಿ ಹಕ್ಕುಪತ್ರ ಸೌಲಭ್ಯ ತಲುಪಿಸುವಲ್ಲಿ ಪ್ರಗತಿ ಸಾಧಿಸಬೇಕು. ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಬಾಕಿ ಇರುವ ವಿವಿಧ ತಾಲ್ಲೂಕುಗಳ ಗ್ರಾಮಗಳನ್ನು ಗುರುತಿಸಿಬೇಕು ಎಂದರು. ಪ್ರಗತಿ ಸಾಧಿಸಿ: ಜಿಲ್ಲೆಯಲ್ಲಿ ಮೃತರ ಹೆಸರಿನಲ್ಲಿರುವ ಜಮೀನುಗಳು ಅವರ ವಾರಸುದಾರರಿಗೆ ಜಮೀನುಗಳ ಖಾತೆ ಬದಲಾವಣೆ ಮಾಡಿಕೊಡಬೇಕು.
ಈಗಾಗಲೇ ಇ-ಪೌತಿ ಖಾತೆ ಅಭಿಯಾನ ನಡೆಸಲಾಗುತ್ತಿದ್ದು, ಜಿಲ್ಲೆಯಲ್ಲಿ ಬಾಕಿ ಪ್ರಕರಣಗಳನ್ನು ಮುಕ್ತಾಯಗೊಳಿಸುವ ಮೂಲಕ ಪ್ರಗತಿ ಸಾಧಿಸಿಬೇಕು ಎಂದು ಆಯುಕ್ತರು ಹೇಳಿದರು. ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿನ ಮೇಲ್ಮನವಿ ಪ್ರಕರಣಗಳು, ಉಪವಿಭಾಗಾಧಿಕಾರಿ ಕೋರ್ಟ್ ಮತ್ತು ವಿವಿಧ ತಹಶೀಲ್ದಾರ್ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥ ಪಡಿಸಬೇಕು. ಭೂಮಿ ವಿಭಾಗದಲ್ಲಿನ ಬಾಕಿ ಪ್ರಕರಣಗಳನ್ನು ನಿಯಮಾನುಸಾರ ಮುಕ್ತಾಯಗೊಳಿಸಬೇಕು ಎಂದು ತಿಳಿಸಿದರು. ದರ್ಖಾಸ್ತು ಮತ್ತು ಬಗರ್ ಹುಕುಂ ಅಡಿಯಲ್ಲಿ ಮಂಜೂರಾದ ಜಮೀನುಗಳು ರೈತರ ಹೆಸರಿಗೆ ಪೋಡಿ ಆಗದೇ ಉಳಿದಿವೆ.
ಇದರಿಂದ ರೈತರಿಗೆ ಬ್ಯಾಂಕ್ ಸಾಲ ಪಡೆಯಲು, ಪಾಲುವಿಭಾಗ ಮಾಡಿಕೊಳ್ಳಲು, ಮಾರಾಟ ಮಾಡಲು ತೊಂದರೆಯಾಗುತ್ತಿದೆ. ಇದನ್ನು ಸರಿಪಡಿಸಲು ‘ನನ್ನ ಭೂಮಿ’ ಎಂಬ ವಿಶೇಷ ಅಭಿಯಾನ ಆರಂಭಿಸಲಾಗಿದೆ ಎಂದು ವಿವರಿಸಿದರು. ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಆನ್ ಲೈನ್ ಸ್ಕ್ಯಾನ್ ನಲ್ಲಿ ಜಿಲ್ಲೆಯ ಉತ್ತಮ ಪ್ರಗತಿ ಸಾಧಿಸಿದ್ದು, ಜನರು ಆನ್ಲೈನ್ ಮೂಲಕವೇ ತಮ್ಮ ದಾಖಲೆಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೇರಿದಂತೆ ಐದು ತಾಲ್ಲೂಕುಗಳ ತಹಶೀಲ್ದಾರರು, ಕಂದಾಯ ನೀರೀಕ್ಷಕರು, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 