ಬಳ್ಳಾರಿ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಆಗ್ರಹಿಸಿ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 18: ಶಿಕ್ಷಣವೆಂಬುದು ಸರ್ವರಿಗೂ ಸಿಗಬೆಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು. ಜಾತಿ, ಮತ, ಬಡವ ಮತ್ತು ಶ್ರಿಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸಕರ್ಾರಗಳದ್ದು, ಆದರೆ 2018-19ನೇ ಸಾಲಿನ ಬಜೆಟ್ನಲ್ಲಿ ರಾಜ್ಯ ಸರಕಾರ ಎಸ್.ಸಿ/ಎಸ್.ಟಿ. ಸೇರಿದಂತೆ, ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು.
ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸಕರ್ಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ರಾಜ್ಯವು ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ.ಇಂದಿನ ಖಾಸಗಿ ಕಾಲೇಜುಗಳ ಡೋನೆಷನ್ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಈ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾಥರ್ಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮಿಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಅಭಾವಿಪ ಆಗ್ರಹಿಸುತ್ತದೆ. ಹಳ್ಳಿಗಳಿಂದ ತಾಲ್ಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾಥರ್ಿಗಳಿಗೆ ಉಚಿತ ಬಸ್ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ.
ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ಕನರ್ಾಟಕ ರಾಜ್ಯ ಸಕರ್ಾರ ಈ ವರ್ಷವು ಕೂಡ ವಿದ್ಯಾಥರ್ಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ. ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸಕರ್ಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು. ಹಾಗೂ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಎಬಿವಿಪಿ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಕೊಡಲಾಯಿತು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 