ಬಳ್ಳಾರಿ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ: ರಾಮ್ ಪ್ರಸಾತ್
ಲೋಕದರ್ಶನ ವರದಿ
ಬಳ್ಳಾರಿ 24: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತಿಕ ಚುನಾವಣೆ-2019ರ ಹಿನ್ನೆಲೆಯಲ್ಲಿ ಮೇ 31 ರಂದು ಜಿಲ್ಲೆಯ ಸಂಡೂರು, ಹೆಚ್.ಹಡಗಲಿ, ಹರಪನಹಳ್ಳಿ, ಹೊಸಪೇಟೆ ತಾಲೂಕಿನ ತಹಶೀಲ್ದಾರರ ಕಚೇರಿಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಈ ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳು ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆ ಭಂಗವಾಗುವ ಸಾಧ್ಯತೆಗಳು ಇರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 31 ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆಯ ಕೇಂದ್ರದ ವ್ಯಾಪ್ತಿಯ ಸುತ್ತಲೂ ದಂಡ ಪ್ರಕಿಯಾ ಸಂಹಿತೆ 1973ರ ಸೆಕ್ಷನ್ ಕಲಂ:144ರಡಿ ನಿಷೇಧಾಜ್ಞೆ ಪ್ರದೇಶವಾಗಿರುತ್ತದೆ.
ಈ ಅವಧಿಯಲ್ಲಿ ಜಿಲ್ಲೆಯ ಸಂಡೂರು, ಹೆಚ್.ಹಡಗಲಿ, ಹರಪನಹಳ್ಳಿ, ಹೊಸಪೇಟೆ ತಾಲೂಕಿನಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ/ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ/ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮತ ಎಣಿಕೆಯ ಪ್ರದೇಶಗಳಲ್ಲಿ ಖಾಸಗಿ ವಾಹನಗಳ ತಂಗುವಿಕೆ, ಧ್ವನಿವರ್ಧಕ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 