ಲೋಕದರ್ಶನ ವರದಿ
ಬಳ್ಳಾರಿ 18: ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಎಸ್.ಸುಭಾಷ್ ಅವರ ಅಧಿಕಾರಾವದಿ ಇದೇ ಜೂ.15ರಂದು ಮುಕ್ತಾಯವಾದ ಹಿನ್ನಲೆಯಲ್ಲಿ ರಸಾಯನಶಾಸ್ತ್ರ ವಿಭಾಗದ ಹಿರಿಯ ಡೀನ್ ಪ್ರೊ. ಕೆ.ಆರ್.ವೇಣುಗೋಪಾಲ್ ರೆಡ್ಡಿ ಅವರನ್ನು ಪ್ರಭಾರಿ ಕುಲಪತಿಗಳಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿ ಹೊರಡಿಸಿದ್ದಾರೆ ಎಂದು ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರೊ.ಎಂ.ಎಸ್.ಸುಭಾಷ್ ಅವರು ಕುಲಪತಿಗಳು ಪರವಾಗಿ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಕೆ.ರಮೇಶ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.