ಬಳ್ಳಾರಿ: ಮತಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ಎಡಿಸಿ ಸತೀಶಕುಮಾರ್

ಬಳ್ಳಾರಿ 18:  ಮತದಾನ ಅತ್ಯಂತ ಅಮೂಲ್ಯವಾಗಿದ್ದು, ಮತದಾರರು ಯಾವುದೇ ರೀತಿಯ ಅಮಿಷಗಳಿಗೆ ಒಳಗಾಗದೇ ಮುಕ್ತ ಮತ್ತು ನಿರ್ಭಿತಯಿಂದ ಹಗೂ ಅಷ್ಟೇ ಅತ್ಯಂತ ಉತ್ಸಾಹದಿಂದ ಮತಗಟ್ಟೆಗೆ ಬಂದು ಮತಚಲಾಯಿಸಿ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸತೀಶಕುಮಾರ್ ಹೇಳಿದರು.

ಲೋಕಸಭಾ ಚುನವಣೆ ಹಿನ್ನೆಲೆಯಲ್ಲಿ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಅಭಿಯಾನದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಹಬ್ಬ ಈ ಮತದಾನ ಪ್ರಕ್ರಿಯೆ ಏ.23ರಂದು ಸರ್ವರೂ ಉತ್ಸಾಹದಿಂದ ಬಂದು ಮತದಾನ ಮಾಡಬೇಕು. ಯಾವುದೇ ಕಾರಣಕ್ಕೂ ಸಂವಿಧಾನ ನಮಗೆ ಕಲ್ಪಿಸಿರುವ ಅಮೂಲ್ಯ ಅವಕಾಶವನ್ನು ಮಿಸ್ ಮಾಡಿಕೊಳ್ಳಬಾರದು. ಯೋಗ್ಯ ವ್ಯಕ್ತಿಗೆ ಮತಚಲಾಯಿಸಿ ಎಂದರು.

ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮತದಾನದ ಮಹತ್ವ, ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯೋಗ ಕೈಗೊಂಡಿರುವ ಕ್ರಮಗಳು, ಮತಗಟ್ಟೆಗೆ ತೆರಳಬೇಕಾದ ಸಂದರ್ಭದಲ್ಲಿರಬೇಕಾದ ದಾಖಲೆಗಳು, ಚುನಾವಣಾ ರಾಯಭಾರಿಗಳ ಸಂದೇಶಗಳನ್ನು ವಸ್ತುಪ್ರದರ್ಶನದಲ್ಲಿ ಭಿತ್ತರಿಸಿರುವುದು ಅತ್ಯಂತ ಶ್ಲಾಘನೀಯ ಎಂದರು.

ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿ-ವಿಜಲ್ ಆ್ಯಪ್ ಸೇರಿದಂತೆ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದ ಅವರು, ಮತದಾರರು ಅತ್ಯಂತ ಖುಷಿಯಿಂದ ಬಂದು ಮತದಾನ ಮಾಡುವ ನಿಟ್ಟಿನಲ್ಲಿ ನೀರು- ನೆರಳು,ವ್ಹೀಲ್ ಚೇರ್, ಭೂತಗನ್ನಡಿ, ವಾಹನದ ವ್ಯವಸ್ಥೆ, ರ್ಯಾಂಪ್ ಸೇರಿದಂತೆ ಅನೇಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಕಡ್ಡಾಯ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ ಅವರು ನೆರೆದಿದ್ದ ಎಲ್ಲರಿಗೆ ಬೋಧಿಸಿದರು.

ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಈಶಾನ್ಯ ಕರ್ನಾಟಕ   ಸಾರಿಗೆ ಸಂಸ್ಥೆಯ ಬಳ್ಳಾರಿ ಜಿಲ್ಲಾಧಿಕಾರಿ ಚಂದ್ರಶೇಖರ, ಸಣ್ಣ ಉಳಿತಾಯ ಇಲಾಖೆಯ ಅಭಿವೃದ್ಧಿ ಅಧಿಕಾರಿ ಹೊನ್ನೂರಪ್ಪ, ಕರ್ನಾಟಕ   ಇಲಾಖೆಯ ಶಿವರಾಜ್, ವಾತರ್ಾ ಇಲಾಖೆಯ ಅಧೀಕ್ಷಕ ಗುರುರಾಜ ಸೇರಿದಂತೆ ಎನ್ಇಕೆಎಸ್ಆರ್ಟಿಸಿ ಹಾಗೂ ವಿವಿಧ ಇಲಾಖೆಗಳ ನೌಕರರು ಮತ್ತು ಸಾರ್ವಜನಿಕರು ಇದ್ದರು.

ಈ ವಸ್ತುಪ್ರದರ್ಶನವು ಏ.20ರವರೆಗೆ ಕೇಂದ್ರ ಬಸ್ ನಿಲ್ದಾಣದಲ್ಲಿರಲಿದ್ದು, ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ತಿಳಿಸಿದ್ದಾರೆ.