ಬಳ್ಳಾರಿ; ಜಿಲ್ಲಾ ಆಸ್ಪತ್ರೆಗೆ ಭೇಟಿ ಪರಿಶೀಲನೆ

ಲೋಕದರ್ಶನ ವರದಿ

ಬಳ್ಳಾರಿ 29: ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ ಬಸವರಾಜು ಅವರು ನಗರದ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇವರಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸಾಥ್ ನೀಡಿದರು.

      ಇ.ಎನ್.ಟಿ., ಲೇಬರ್ ವಾಡರ್್, ಮಕ್ಕಳ ವಿಭಾಗ, ಸ್ಪೀಚ್ ಥೆರಪಿ, ಒಪಿಡಿ, ಎಸ್.ಎನ್.ಸಿಯು, ಶಸ್ತ್ರಚಿಕಿತ್ಸೆ ವಿಭಾಗ ಸೇರಿದಂತೆ ಆಸ್ಪತ್ರೆಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಲ್ಲಿ ಹಾಜರಿದ್ದ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಬಸರೆಡ್ಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕುರಿತು ಮಾಹಿತಿ ನೀಡಿದರು. ವಿಕಲಚೇತನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಮತ್ತು ತಮ್ಮಲ್ಲಿರುವ ಸೌಲಭ್ಯಗಳ ಕುರಿತು ಹೆಚ್ಚಿನ ಪ್ರಚಾರ ನೀಡುವ ಕೆಲಸ ಮಾಡಿ ಎಂದರು.

          ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾತನಾಡಿ, ಮುಂದಿನ ತಿಂಗಳ ಎರಡನೇ ವಾರದಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ವಿಕಲಚೇತನರಿಗೆ ಕಲ್ಪಿಸಬೇಕಾದ ಆರೋಗ್ಯ ಸೌಲಭ್ಯಗಳು, ಪರಿಣಾಮಕಾರಿ ಆರೋಗ್ಯ ಸೇವೆ ಸೇರಿದಂತೆ ಇನ್ನೀತರ ವಿಷಯಗಳ ಕುರಿತು ಚಚರ್ಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

      ಈ ಸಂದರ್ಭದಲ್ಲಿ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಉಪ ಆಯುಕ್ತ ಪದ್ಮನಾಭ, ಸಲಹೆಗಾರ ಹಂಪಣ್ಣ, ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ, ಡಿಹೆಚ್ಒ ಡಾ.ರಾಜಶೇಖರ ರೆಡ್ಡಿ, ಡಿಡಿಪಿಐ ಶ್ರೀಧರನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.