ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ

ಬಳ್ಳಾರಿ, ಮೇ 26, ಗಡಿನಾಡು ಬಳ್ಳಾರಿಯಲ್ಲಿ ಕೊರೊನಾ ವಾರಿಯರ್ ಶುಶ್ರೂಷಕ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ ಆಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 36 ವರ್ಷದ  ಶೂಶ್ರೂಷಕ್ ಕೊರೊನಾ ಸೋಂಕು ತಗುಲಿದೆ.ಜಿಲ್ಲಾ ಆಸ್ಪತ್ರೆಯಲ್ಲಿ 14 ದಿನಗಳ ಕೆಲಸ ಮಾಡಿದ ಬಳಿಕ ಶುಶ್ರೂಷಕ 14 ದಿನದ ಹೋಟೆಲ್ ಕ್ವಾರಂಟೈನ್ ನಲ್ಲಿದ್ದರು. ಈ ಸಮಯದಲ್ಲಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸೋಮವಾರ ರಾತ್ರಿ ಸೋಂಕು ದೃಢವಾಗಿದೆ.  ಸೋಂಕಿತ ಶುಶ್ರೂಷಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.ಸೋಂಕಿತ ಕ್ವಾರಂಟೈನ್ ನಲ್ಲಿದ್ದ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಪ್ರದೇಶ ಘೋಷಿಸಿಲ್ಲ. ಶುಶ್ರೂಷಕ‌ ಪಿಪಿಇ ಕಿಟ್ ಸೇರಿ ಅಗತ್ಯ ಸುರಕ್ಷತಾ ಸಾಧನಗಳೊಂದಿಗೆ ಅವರು ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಸೋಂಕು ಹೇಗೆ ತಗುಲಿದೆ ಎಂಬುದು  ನಿಗೂಢವಾಗಿದೆ. ಆದ್ದರಿಂದ ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಸದ್ಯ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ ಆಗಿದ್ದು, 15 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಓರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, 21 ಕೊರೊನಾ ಸಕ್ರಿಯ ಪ್ರಕರಣಗಳಿವೆ.