ಕಿಸಾನ್ ಸಮ್ಮಾನ ಯೋಜನೆಯಡಿ ರೈತರಿಗೆ ಲಾಭ ದೊರಕಿಸಿ: ನೇದಲಗಿ

ಲೋಕದರ್ಶನ ವರದಿ

ವಿಜಯಪುರ 25: ಕೇಂದ್ರ ಸಕರ್ಾರ ಜಾರಿಗೊಳಿಸಿರುವ ಕಿಸಾನ್ ಸಮ್ಮಾನ ಯೋಜನೆಯಡಿ ರೈತರಿಗೆ ಸೌಲಭ್ಯ ಕಲ್ಪಿಸುವ ಕುರಿತಂತೆ ಹೆಚ್ಚಿನ ಸಿಬ್ಬಂದಿಗಳನ್ನು ತರಬೇತಿಗೊಳಿಸುವಂತೆ ಹಾಗೂ ಈ ಯೋಜನೆಯ ಲಾಭ ಹೆಚ್ಚಿನ ಸಂಖ್ಯೆಯ ರೈತರು ಪಡೆಯುವ ದಿಸೆಯಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿವಯೋಗಪ್ಪ ನೇದಲಗಿ ಅವರು ಸೂಚನೆ ನೀಡಿದರು. 

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು 13ನೇ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಧಾನಮಂತ್ರಿಗಳ ಕಿಸಾನ್  ಸಮ್ಮಾನ ನಿಧಿ ಯೋಜನೆಯಡಿ ರೈತರಿಗೆ ವಾಷರ್ಿಕವಾಗಿ 6 ಸಾವಿರ ರೂ. ನೀಡುವ ಯೋಜನೆ ಜಾರಿಯಲ್ಲಿದ್ದು, ಈಗಾಗಲೇ ರೈತರ ಸಂಭವನೀಯ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಈ ಯೋಜನೆಯ ಲಾಭ ಪ್ರತಿಯೊಬ್ಬ ರೈತರು ಪಡೆಯುವಂತೆ ನೋಡಿಕೊಳ್ಳಬೇಕು. ಅದರಂತೆ ಬೆಳೆ ವಿಮೆ ಯೋಜನೆ ಲಾಭ ಸಹ ರೈತರಿಗೆ ದೊರಕಿಸಲು ಅವಶ್ಯಕ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲಾ ಪಂಚಾಯತ್ ಸದಸ್ಯ ಸಾಬು ಮಾಶ್ಯಾಳ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಘಟನೆ ಕುರಿತಂತೆ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆ ಉಪನಿದರ್ೇಶಕರಿಗೆ ತಿಳಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಈ ಪ್ರಕರಣ ಪೋಲಿಸ್ ಇಲಾಖೆ ವ್ಯಾಪ್ತಿಯಲ್ಲಿ ಇರುವುದರಿಂದ ಈ ಕುರಿತಂತೆ ಸೂಕ್ತ ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಭೆಗೆ ತಿಳಿಸಿದರು. 

ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋಸರ್್ ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸಮಿತಿಗಳಿಗೆ ಜಿಲ್ಲಾ ಪಂಚಾಯತ್ ಸದಸ್ಯರನ್ನು ಸಹ ಸದಸ್ಯರನ್ನಾಗಿ ನೇಮಿಸಲು ಅವಶ್ಯಕ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸರ್ವ ಸದಸ್ಯರು ಒತ್ತಾಯಪಡಿಸಿದರು. ಇಂದಿನ ಸಭೆಯನ್ನು ಬರುವ ಮಾಚರ್್ 01ಕ್ಕೆ ಮುಂದುವರೆಸಲು ನಿರ್ಧರಿಸಲಾಯಿತು. 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸ್ಥಾಯಿ ಸಮಿತಿ ಅಧ್ಯಕ್ಷರು, ವಿವಿಧ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕುಂಬಾರ ಸ್ವಾಗತಿಸಿದರು.