ಬೆಟಗೇರಿ ಕರವೇ ಘಟಕದವರಿಂದ ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಂತಾಪ
Betageri Karave Unit condoles the passing away of Saalu Marad Thimmakka
ಬೆಟಗೇರಿ 14: ಸಾಲು ಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಭಾವಿಸಿ ಪೋಷಿಸಿ ಬೆಳಸಿದಾಕೆ. ಸಾಲು ಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿದ್ದರೂ ಸಹ ಪರಿಸರ ಬಗ್ಗೆ ಅಪಾರ ಕಾಳಜಿಯುಳ್ಳ ವೃಕ್ಷ ಮಾತೆಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅವರು ನ.14ರಂದು ಸಾಲು ಮರದ ತಿಮ್ಮಕ್ಕ ನಿಧನಕ್ಕೆ ತೀವ್ರ ಸಂತಾಪ ಶೋಕ ಸೂಚಿಸಿ ಮಾತನಾಡಿ, ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದನ್ನು ಹಲವಾರು ರಾಜ್ಯ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಸಾಲು ಮರದ ತಿಮ್ಮಕ್ಕ ಅವರ ಅವಿಸ್ಮರಣೀಯ ಸೇವಾ ಕಾರ್ಯ ಗಮನಿಸಿ ಪುಸ್ಕರಿಸಿವೆ ತಿಮ್ಮಕ್ಕ ಅವರು ಮುಂದಿನ ಪೀಳಿಗೆಯ ಒಳಿತಿಗಾಗಿ ಸಾಲು ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಪೋಷಿಸಿ ನೀರುಣಿಸಿ ಬೆಳಸಿದ್ದಾರೆ ಎಂದರು.
ಈ ವೇಳೆ ಶಂಭು ಹಿರೇಮಠ, ಬಸವರಾಜ ದೇಯಣ್ಣವರ, ಮಂಜುನಾಥ ಪತ್ತಾರ, ಶೀವು ನಾಯ್ಕರ, ಮಾಯಪ್ಪ ಕೋಣಿ, ಸೇರಿದಂತೆ ಸ್ಥಳೀಯ ಕರವೇ ಬೆಟಗೇರಿ ಗ್ರಾಮ ಘಟಕದ ಸದಸ್ಯರು, ಸ್ಥಳೀಯ ಪರಿಸರ ಪ್ರೇಮಿಗಳು, ಸ್ಥಳೀಯರು ಸಾಲು ಮರದ ತಿಮ್ಮಕ್ಕ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 