ಭಾಗ್ಯನಗರ: ಇತಿಹಾಸ ಉಪನ್ಯಾಸಕ ರಾಜಕುಮಾರಗೆ ಪಿಎಚ್ಡಿ
Bhagyanagar: History lecturer Rajkumar gets Ph.D
ಕೊಪ್ಪಳ 11: ಭಾಗ್ಯನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ ಅವರಿಗೆ ವಿಜಯನಗರ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಕಲಬುರಗಿಯ ಸಹ ಪ್ರಾಧ್ಯಾಪಕರಾದ ಮಲ್ಲಿಕಾರ್ಜುನ್ ಶೆಟ್ಟಿಅವರ ಮಾರ್ಗದರ್ಶನದಲ್ಲಿ ಭಾಗ್ಯನಗರದ ಸರ್ಕಾರಿ ಪ.ಪೂ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ಅವರು, ಚರಿತ್ರೆ ವಿಭಾಗದಲ್ಲಿ “ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗಗಳ ಚರಿತ್ರೆ ಮತ್ತು ಪರಿಣಾಮಗಳು'' ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಲಭಿಸಿದ್ದು, ಇತ್ತೀಚೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಹಾಗೂ ಹಂಪಿ ಕನ್ನಡ ವಿವಿ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ರಾಜಕುಮಾರಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿರುತ್ತಾರೆ ಎಂದು ಭಾಗ್ಯನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 