ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ
ಗದಗ 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಟಗೇರಿ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಫೆಬ್ರವರಿ 12 ರಂದು ಬೆಳಿಗ್ಗೆ 11 ಗಂಟೆಗೆ ಬೆಟಗೇರಿ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆ: ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ ಕಾರ್ಯಕ್ರಮ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಆದರ್ಶ ಶಿಕ್ಷಣ ಸಮಿತಿ ಅಧ್ಯಕ್ಷ ಕೆ. ವಿ. ಕುಷ್ಟಗಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ವಾರ್ತಾಧಿಕಾರಿ ವಸಂತ ಬಿ ಮಡ್ಲೂರ, ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಪ್ರೊ. ಕೆ. ಗಿರಿರಾಜ ಕುಮಾರ್, ಐಕ್ಯೂಎಸಿ ಕೋಆರ್ಡಿನೇಟರ್ ಡಾ.ವಿ. ಟಿ. ನಾಯ್ಕರ್‌ಪಾಲ್ಗೊಳ್ಳುವರು. ಹುಲಕೋಟಿ ಜಿಸಿಟಿಎಂ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ. ಅರ್ಜುನ ಗೊಳಸಂಗಿ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ.ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.