ಫೆ.12 ರ ಮುಷ್ಕರಕ್ಕೆ ಕಾರ್ಮಿಕರ ಸಂಘಟನೆಗಳು ಬೆಂಬಲಿಸಿ : ಭಾರತಿ ವಾಲಿ ಕರೆ
Bharathi Wali calls on workers' organizations to support the strike on Feb. 12
ಇಂಡಿ 10: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಫೆ.12ರಂದು ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಅಂದು ಇಂಡಿ ಹಾಗೂ ಚಡಚಣ ತಾಲ್ಲೂಕಿನ ಕಾರ್ಮಿಕರು ರಜೆ ಹಾಕಿ ಮುಷ್ಕರದಲ್ಲಿ ಪಾಲ್ಗೊಂಡು ನಗರದಲ್ಲಿಯೂ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳು ತಾವು ಎಲ್ಲರೂ ಇಂಡಿ ಬಂದಗೆ ಬೆಂಬಲಿಸಿ ಯಶಸ್ವಿ ಗೊಳಿಸಬೇಕು. ಎಂದು ಇಂಡಿ ತಾಲೂಕು ಸಿಐಟಿಯು ಅಧ್ಯಕ್ಷರಾದ ಭಾರತಿ ವಾಲಿ ಮನವಿ ಮಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂದು ಬೆಳಗ್ಗೆ 11ಕ್ಕೆ ನಗರದ ಅಂಬೇಡ್ಕರ್ ವೃತ್ತ ಮಾಹಾವೀರ ವೃತ ಮೂಲಕ ಬಸವೇಶ್ವರ ವೃತ್ತದ ಬಳಿ ಬೃಹತ್ ಪ್ರತಿಭಟನಾ ನಡೆಯಲಿದೆ.
ಇದಕ್ಕೂ ಮೊದಲು ನಗರದ ವಿವಿಧೆಡೆಯಿಂದ ಕಾರ್ಮಿಕರು, ರೈತರು, ಅಂಗನವಾಡಿ ಫೆಡರೇಷನ್, ಬಿಸಿಯೂಟ ನೌಕರರ ಫೆಡರೇಷನ್ ಸೇರಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಡಚಣ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಅಶ್ವಿನಿ ತಳವಾರ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕ ಸಂಘಗಳನ್ನು ನಿಯಂತ್ರಿಸಲು ಹಾಗೂ ಬಂಡವಾಳದ ದಾಳಿಯ ವಿರೋಧಿಸಿ ಕಾರ್ಮಿಕ ವರ್ಗ ಚಳವಳಿಯನ್ನು ನಿಶ್ಯಕ್ತಗೊಳಿಸಲು ಉದ್ದೇಶಿಸಿದೆ.
ಈ ಮುಷ್ಕರಕ್ಕೆ ರಾಷ್ಟ್ರ ಮಟ್ಟದಲ್ಲಿನ ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ ಕರ್ನಾಟಕ ಸಂಘ ಸೇರಿದಂತೆ ನಾನಾ ಸಂಘಗಳು ಬೆಂಬಲಿಸಲಿವೆ ಎಂದು ಹೇಳಿದರು. ಕರ್ನಾಟಕ ರೈತ ಪ್ರಾಂತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಅವರು ಮಾತನಾಡಿ ಮನರೇಗಾ ಯೋಜನೆಯನ್ನು ವಿಬಿ.ಜಿ ರಾಮ್‌ಜಿ ಎಂದು ಬದಲಾಯಿಸಿ ಉದ್ಯೋಗ ಖಾತ್ರಿಯ ಹಕ್ಕನ್ನೇ ಕಸಿದುಕೊಂಡು ಹಳ್ಳಿಯ ಬಡಜನರ ಆಸರೆಯನ್ನು ಕಿತ್ತುಕೊಂಡಿದೆ. ಆದ್ದರಿಂದ ದುಡಿಯುವ ಕಾರ್ಮಿಕ ಹಕ್ಕು ಹಾಗೂ ಸಾರ್ವಜನಿಕ ಉದ್ಯಮಗಳನ್ನು ಉಳಿಸಲು, ರೈತರ ನ್ಯಾಯಬದ್ಧ ಬೇಡಿಕೆಗಳನ್ನು ಎತ್ತಿ ಹಿಡಿಯಲು ಹೋರಾಟ ಕೈಗೊಂಡಿದೆವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗೀರಿಜಾ ಸಕ್ಕರಿ ಚಡಚಣ ತಾಲೂಕು ಬಿಸಿ ಊಟ ನೌಕರರ ಸಂಘದ ಅಧ್ಯಕ್ಷರಾದ ಮಾಹಾನಂದ ದೊತರೇ ಹಾಗೂ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶೋಭಾ ಕಬಾಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಎಸ್. ಡಿ ಪಟ್ಟಣಶೆಟ್ಟಿ ಹಾಗೂ ಎಮ್ ಎಲ್ ಚೌದರಿ ಲಾಲಮ್ಮಮದ ಶೇಖ್ ಬಸವರಾಜ ಪಾಟೀಲ ಸಿದ್ದು ಪೂಜಾರಿ ಶಿವಾನಂದ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 