ಭೀಮಾಕೋರೆ ಗಾಂವ್ ವಿಜಯೋತ್ಸವ ಕಾರ್ಯಕ್ರಮ

Bhimakore Gaon Victory Program

ಭೀಮಾಕೋರೆ ಗಾಂವ್ ವಿಜಯೋತ್ಸವ ಕಾರ್ಯಕ್ರಮ

ಬಳ್ಳಾರಿ 01  : ಛಲವಾದಿ ಮಹಾಸಭಾ ಜಿಲ್ಲಾ ಸಮಿತಿಯು ನಗರದ ಬಿ ಗೋನಾಳ್ 17 ನೇ ವಾರ್ಡ್‌ ನಲ್ಲಿ ಭೀಮಾಕೋರೆ ಗಾಂವ್ ವಿಜಯೋತ್ಸವದ ಕಾರ್ಯಕ್ರಮವನ್ನು ಆಯೋಜಿಸಿತ್ತು. ಭೀಮ ಕೋರೆಗಾಂವ್ ಸ್ಥಂಭದ ಭಾವಚಿತ್ರಕ್ಕೆ, ಹೂಮಾಲೆ ಅರ​‍್ಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಸಿ ಶಿವಕುಮಾರ್, ಜನವರಿ 1, ಜಗತ್ತಿಗೆ ಹೊಸ ವರ್ಷದ ಸಂಭ್ರಮಾಚಾರಣೆಯಾದರೆ ಶೋಷಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದು ವಿಜಯ ಸಾಧಿಸಿದ ಮಹಾರ್ ಯೋಧರ ಶೌರ್ಯದ ದಿನವಾಗಿದೆ.ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬದುಕಿನಲ್ಲಿ ಮುಖ್ಯ ಪ್ರೇರಣೆ ನೀಡಿದ ಈ ದಿನವು ನಮ್ಮೆಲ್ಲರ ಪಾಲಿಗೆ ವಿಜಯೋತ್ಸವದ ದಿನವಾಗಿದೆ. ಕ್ರಿಶ. 1800 ರ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿದ್ದ ಪೇಶ್ವಗಳು ಮನು ಸಂವಿಧಾನವನ್ನು ಜಾರಿಗೆ ತರುವ ಮೂಲಕ ಅಸ್ಪೃಶ್ಯರ ಜೀವನವನ್ನು ಕಠೋರವಾಗಿಸಿದ್ದರು. ಸಾರ್ವಜನಿಕ ಕೆರೆಗಳನ್ನು ಬಳಸದಂತೆ ನಿರ್ಬಂಧ ಹೇರಲಾಗಿತ್ತು.ತಮ್ಮ ಮೇಲೆ ಈ ರೀತಿಯ ಅಮಾನುಷ ಕೃತ್ಯಗಳನ್ನು ನಡೆಸುತ್ತಿದ್ದ ಪೇಶ್ವಗಳ ದೌರ್ಜನ್ಯ ದಬ್ಬಾಳಿಕೆಯಿಂದ ರೋಸಿ ಹೋಗಿದ್ದ ಅಸ್ಪೃಶ್ಯರು ತಮ್ಮ ಜನಾಂಗದ ಮುಕ್ತಿಗಾಗಿ ಹಾತೊರೆಯುತ್ತಿದ್ದರು.ಎಂದು ಹೇಳಿದರು.ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ಶಂಕರ್ ನಂದಿಹಾಳ ಮಾತನಾಡಿ, ಉತ್ತರಭಾರತದಲ್ಲಿ ಅಧಿಪತ್ಯ ಸ್ಥಾಪಿಸಿದ್ದ ಬ್ರಿಟಿಷರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮಹಾರ್ ವೀರ ಸಿದ್ಧನಾಕನ ನೇತೃತ್ವದಲ್ಲಿ ಮಾತುಕತೆ ನಡೆಸಿ ತಮ್ಮನ್ನು ಬೆಂಬಲಿಸಿದರೆಆಸ್ಪೃಶ್ಯರ ಮೇಲೆ ನಡೆಯುವ ದೌರ್ಜನ್ಯ ದಬ್ಬಾಳಿಕೆಗೆ ಅಂತ್ಯ ಹಾಡುತ್ತೇವೆ ಹಾಗೂ ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸುವ ಭರವಸೆ ನೀಡಿದರು.ಅಸ್ಪೃಶ್ಯತೆಯ ಆಚರಣೆಯಿಂದ ನೊಂದು ಬೆಂದಿದ್ದ ವೀರ ಮಹಾರ್ ಜನಾಂಗದ 500 ಜನ ಯುವ ಯೋಧರು ಯುದ್ಧ ತರಬೇತಿಯೊಂದಿಗೆ 1818ರ ಜನವರಿ ಽ ರಂದು ಬ್ರಿಟೀಷ್ ಕ್ಯಾಪ್ಟನ್ ಎಸ್‌.ಎಸ್‌. ಸಂಡನ್ ನೇತೃತ್ವದಲ್ಲಿ ಭೀಮಾ ನದಿಯ ತೀರದಲ್ಲಿ ಕೋರೆಗಾಂವ್ ಎಂಬ ಸ್ಥಳದಲ್ಲಿ ಸುಮಾರು 28000 ಸೈನಿಕರಿದ್ದ ಬ್ರಾಹ್ಮಣ ಪೇಶ್ವಗಳ ಮೇಲೆ ಯುದ್ಧ ಸಾರಿ ಸುಮಾರು 13 ರಿಂದ 14 ಸಾವಿರಕ್ಕೂ ಹೆಚ್ಚಿನ ಪೇಶ್ವ ಗಳ ಸೈನಿಕರನ್ನು ಕೊಂದು ಹಾಕಿ ಆಡಳಿತವನ್ನು ವಶಪಡಿಸಿಕೊಳ್ಳುವ ಮೂಲಕ ತನ್ನ ಮೇಲಿನ ಅಸ್ಪೃಶ್ಯತಾ ಆಚರಣೆಗೆ ಅಂತ್ಯ ಹಾಡಿದರು.ಈ ಸಂದರ್ಭದಲ್ಲಿ ಸುಮಾರು 22 ರಿಂದ 25 ಜನ ವೀರ ಮಹಾರ್ ಯೋಧರು ಬಲಿದಾನವಾಗುವ ಮೂಲಕ ನಮ್ಮ ಸಮುದಾಯವೇ ತಲೆ ಎತ್ತಿ ನಿಲ್ಲುವಂತೆ ಮಾಡಿದ್ದಾರೆ.ವೀರ ಯೋಧರ ಗೌರವಾರ್ಥ ಯುದ್ಧ ನಡೆದ ಜಾಗದಲ್ಲಿ 65 ಅಡಿಯ ಎತ್ತರದ ಭವ್ಯ "ವಿಜಯ ಸ್ಥಂಭ" ನಿರ್ಮಿಸಿ ಆ ಸ್ಥಂಭದ ಮೇಲೆ ಅಮರ ವೀರರ ಹೆಸರನ್ನು ಕೆತ್ತಿಸಿದ್ದಾರೆ. ಅಸ್ಪೃಶ್ಯರ ಸ್ವಾಭಿಮಾನದ ಸಂಕೇತವಾದ ಈ ಘಟನೆಯು ನಮ್ಮೆಲ್ಲರಿಗೂ ಆತ್ಮ ಗೌರವನ್ನು ಎತ್ತಿ ಹಿಡಿಯುವ ದಿನವಾಗಿದೆ. ಇಂತಹ ಸ್ವಾಭಿಮಾನದ, ಆತ್ಮಗೌರವದ ದಿನವನ್ನು ಶೋಷಿತ ಸಮುದಾಯದವರು ನೆನಪಿಸಿಕೊಂಡು ಅಮರ ವೀರರ ಕೆಚ್ಚೆದೆಯ ಸ್ವಾಭಿಮಾನವನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಅವರ ತ್ಯಾಗ ಬಲಿದಾನದಿಂದ ಮನು ಸಂವಿದಾನಕ್ಕೆ ಪೆಟ್ಟು ಬಿದ್ದು ಅಸ್ಪೃಶ್ಯರಿಗೆ ವಿದ್ಯಾಭ್ಯಾಸ ನೀಡಲು, ಸೈನ್ಯಕ್ಕೆ ಸೇರಲು, ಸಾಮಾಜಿಕವಾಗಿ ಅಲ್ಪ ಪ್ರಮಾಣದಲ್ಲಿ ನಾಗರೀಕ ಬದುಕು ಕಾಣಲು ಸಾಧ್ಯವಾಗಿದೆ.ಅಂದು ಅಸ್ಪೃಶ್ಯರು ಬ್ರಿಟೀಷರ ಪರವಾಗಿ ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ ಜನಾಂಗಕ್ಕೆ ತಮ್ಮ ಮಕ್ಕಳು ಮುಂದಿನ ಭವಿಷ್ಯ, ಹೊಟ್ಟೆಗೆ ಅನ್ನ ದೊರಕಿಸಿಕೊಳ್ಳುವ ಸ್ವಾಭಿಮಾನದಿಂದ ಬದುಕುವ ಉದ್ದೇಶಕ್ಕೆ ತಮ್ಮ ಅಮೂಲ್ಯ ಜೀವವನ್ನು ಅರೆ​‍್ಣ ಮಾಡಿದ ನಮ್ಮ ಹುತಾತ್ಮರಾದ ಯೋಧರಿಗೆ ನಾವೆಲ್ಲ ಗೌರವಿಸಬೇಕಾಗಿದೆ ಎಂದು ಹೇಳಿದರು ಹಾಗೂ ಹೊಸ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ  ದಲಿತ ಮುಖಂಡರಾದ  ಹೊನ್ನೇಶ್  ಗೋನಾಳ್, (ಬಿ. ಡಿ ಹಳ್ಳಿ ) ಹಾಗೂ ಆಹಿಂದ ಜಿಲ್ಲಾಧ್ಯಕ್ಷರಾದ ತಿಮ್ಮಪ್ಪ ಬಿ ಗೋನಾಳ ಮಾನಯ್ಯ ಜಿಲ್ಲಾ ಉಪಾಧ್ಯಕ್ಷರು ಛಲವಾದಿ ಮಹಾಸಭಾ ಸಿ ಹನುಮೇಶ್ ಕಟ್ಟಿಮನಿ ಜಿಲ್ಲಾ ಕಾರ್ಯಧ್ಯಕ್ಷರು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಲೋಕೇಶ್ ಕಪಗಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಛಲವಾದಿ ಮಹಾಸಭಾ ವೆಂಕಟೇಶ್ ಜಿಲ್ಲಾ ಜಂಟಿ ಕಾರ್ಯದರ್ಶಿ   ಡಿ ರಾಮಕೃಷ್ಣ ಜಿಲ್ಲಾ ಕಾರ್ಯದರ್ಶಿ   ಮಲ್ಲಿಕಾರ್ಜುನ ಬಿ ಗೋನಾಳ   ಯಲ್ಲಪ್ಪ ಕುಡಿತಿನಿ ದಲಿತ ಮುಖಂಡರು ಹಾಗೂ ಮಧುರಾಜ್ ಬಿ ಗೋನಾಳ್ ದಲಿತ ಯುವ ಮುಖಂಡರು ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು  ಹಾಗೂ ದಲಿತ ಸಮುದಾಯದವರು  ಇತರರು  ಭಾಗವಹಿಸಿದ್ದರು.