ವೇದಿಕೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
Bhumi Puja for stage construction work
ವೇದಿಕೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಖಾನಾಪುರ 09: ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶಾಲಾ ಆವರಣದಲ್ಲಿ ವೇದಿಕೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಮಕ್ಕಳು ಪಠ್ಯ ಚಟುವಟಿಕೆ ಜೊತೆ ಜೊತೆಗೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ದೈಹಿಕ ಬೆಳವಣಿಗೆಗೆ ಕ್ರೀಡೆ ಕೂಡ ಮಹತ್ವ. ಮೊಬೈಲ್ ಗೀಳಿನಿಂದ ಹೊರಬಂದು ಮೈದಾನದಲ್ಲಿ ಆಟವಾಡಬೇಕು. ಅಂದಾಗ ಮಾತ್ರ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು. ಕಾರ್ಯಕ್ರಮದಲ್ಲಿ ಖಾನಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಗಾಡೆ, ಪಕ್ಷದ ಮುಖಂಡರಾದ ಯಶವಂತ ಬಿರ್ಜೆ, ವಿನಾಯಕ ಮುತಗೇಕರ್, ವಾಯ್.ಎನ್.ಮಜುಕರ್ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 