ಟಿಪ್ಪರ್‌ಗೆ ಬೈಕ್ ಡಿಕ್ಕಿ: ಸವಾರ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ
Bike collides with tipper: Rider dies, another seriously injured
ದೇವರಹಿಪ್ಪರಗಿ 31: ಟಿಪ್ಪರ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ, ಇನ್ನೊಬ್ಬನಿಗೆ ಗಂಭೀರ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ-50ರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜರುಗಿದೆ.
ತಾಲೂಕಿನ ದೇವೂರ ತಾಂಡಾದ ಗ್ರಾಮದ ಅನೀಲ ಕೇಸು ರಾಠೋಡ (34) ಮೃತ ದುರ್ದೈವಿ. ಬೈಕ್ ನಲ್ಲಿದ್ದ ಮತ್ತೊಬ್ಬ ಸವಾರ ಅವಿನಾಶ ಮನೋಹರ ರಾಠೋಡ(26) ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವೂರ ತಾಂಡಾದಿಂದ ಪಡಗಾನೂರ ಗ್ರಾಮಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ.
ಬೈಕ್ ಸವಾರರು ಅಂಬೇಡ್ಕರ್ ವೃತ್ತದ ಬಳಿ ಸಾಗುತ್ತಿದ್ದಾಗ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಟಿಪ್ಪರ್ (ಕೆ.ಎ-28ಎಎ-5724) ಇಂಡಿ ಕಡೆಗೆ ಹೋಗಲು ಬಲಕ್ಕೆ ತಿರುಗಿದ ಸಂದರ್ಭದಲ್ಲಿ ನಡೆದ ಘಟನೆ.
ಘಟನಾ ಸ್ಥಳಕ್ಕೆ ಪೊಲೀಸರು ತಕ್ಷಣ ಭೇಟಿ ನೀಡಿ, ಟ್ರಾಫಿಕ್ ದಟ್ಟಣೆ ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಕುರಿತು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ಟಿಪ್ಪರ್ ಚಾಲಕನ ನಿರ್ಲಕ್ಷ ಹಾಗೂ ವೇಗದ ಚಾಲನೆಯಿಂದ ಈ ಘಟನೆ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರ ಗ್ರಾಮದಲ್ಲಿ ಮುಗಿಲು ಮುಟ್ಟಿದ ಅಕ್ರಂದನ: ದೇವೂರ ತಾಂಡದ ಮೃತ ಅನೀಲ ರಾಠೋಡ ತಮ್ಮ ತಂದೆ ತಾಯಿಯನ್ನು ಮೊದಲೇ ಕಳೆದುಕೊಂಡಿದ್ದು, ಕುಟುಂಬಕ್ಕೆ ಒಬ್ಬನೇ ಮಗನಾಗಿದ್ದ. ಇವರ ಸಾವಿನಿಂದ ಪತ್ನಿ, ಇಬ್ಬರು ಪುತ್ರರು ಹಾಗೂ ಒರ್ವ ಪುತ್ರಿ ಅನಾಥರಾಗಿದ್ದಾರೆ. "ಕುಟುಂಬದ ಆಧಾರ ಸ್ಥಂಭವನ್ನೇ ವಿಧಿ ಕಿತ್ತುಕೊಂಡಿದೆ" ಎಂದು ತಾಂಡಾ ಜನರು ಕಣ್ಣೀರಿಡುತ್ತಿರುವುದು ಮನ ಕಲಕುವಂತಿತ್ತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 