ಬೈಕ್ ಮುಖಾಮುಖಿ ಡಿಕ್ಕಿ : ಸಾವು ; ಮೂರು ಜನರಿಗೆ ಗಾಯ

Bike head-on collision: death; Three people were injured

ಬೈಕ್ ಮುಖಾಮುಖಿ ಡಿಕ್ಕಿ : ಸಾವು ; ಮೂರು ಜನರಿಗೆ ಗಾಯ  

ಹೂವಿನ ಹಡಗಲಿ  21: ಪಟ್ಟಣದ ಎಂ.ಪಿ.ಪ್ರಕಾಶ್ ನಗರ ಬಳಿ ಭಾನುವಾರ ರಾತ್ರಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಮಂಗಳವಾರ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ.ಇನ್ನ ಮೂರು ಜನರು ತೀವ್ರಗಾಯಗೊಂಡು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನ ಕತ್ತೆಬೆನ್ನೂರು ಗ್ರಾಮದ ನಂದೀಶ (38) ಮೃತರು. ಅವರಿಗೆ ಪತ್ನಿ, ಪುತ್ರ ಇದ್ದಾರೆ. ಮೃತ ನಂದೀಶ ಅವರು ಸ್ನೇಹಿತನ ಎನ್‌.ಪ್ರಶಾಂತ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ.ಬೈಕ್ ನಲ್ಲಿ ಹೊಳಗುಂದಿಗೆ ಹೊರಟಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ನಂದೀಶ್ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ನಂದೀಶ ದೋಣಿ ಸ್ವಗ್ರಾಮ ಕಾಂತೆಬೆನ್ನೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.