ಬೈಕ್ ರಾ್ಯಲಿಗೆ ಚಾಲನೆ
Bike rally kicks off
ಹಾವೇರಿ 30: 37ನೆಯ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಅಂಗವಾಗಿ ಶುಕ್ರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹಾವೇರಿ ವತಿಯಿಂದ ಜನ ಜಾಗೃತಿ ಮೂಡಿಸುವ ಕುರಿತು ಬೈಕ್ ರಾ್ಯಲಿ (ದ್ವಿಚಕ್ರ ವಾಹನಗಳ ಜಾಥಾ)ವನ್ನು ಹಾವೇರಿ ಯಲ್ಲಿ ಆಯೋಜಿಸಲಾಗಿತ್ತು. ಪೊಲೀಸ್ ಅಧೀಕ್ಷಕರು, ಹಾವೇರಿ ರವರು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಸದರಿ ಜಾಥಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ ಪ್ರಾರಂಭಗೊಂಡು, ಮಹರ್ಷಿ ಶ್ರೀ ವಾಲ್ಮೀಕಿ ವೃತ್ತ, ಶಹರ ಪೊಲೀಸ್ ಠಾಣೆ, ಸರ್ ಶ್ರೀ ಹೊಸಮನಿ ಸಿದ್ಧಪ್ಪ ವೃತ್ತಗಳ ಮುಖಾಂತರ ಸಾಗಿ ಪ್ರವಾಸಿ ಮಂದಿರದಲ್ಲಿ ಮುಕ್ತಾಯಗೊಂಡಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾನ್ಯ ಪೊಲೀಸ ಅಧೀಕ್ಷಕರು ಹಾವೇರಿ ರವರು ರಸ್ತೆ ಸುರಕ್ಷತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸದರಿ ಬೈಕ್ ರಾ್ಯಲಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಿಬ್ಬಂದಿ, ಟ್ರಾಫಿಕ್ ಪೊಲೀಸ್ ಸಿಬ್ಬಂದಿ, ಮೋಟಾರ್ ವಾಹನ ಚಾಲನಾ ತರಬೇತಿ ಶಾಲೆಗಳ ಸಿಬ್ಬಂದಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ, ವಾಹನಗಳ ಮಾರಾಟ ಕೇಂದ್ರಗಳ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಸಹ ಭಾಗವಹಿಸಿ ಬೈಕ್ ರಾ್ಯಲಿಯನ್ನು ಯಶಸ್ವಿಗೊಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 