ಒಣಗಿದ ಮರ ಬಿದ್ದು ಬೈಕ್ ಸವಾರನಿಗೆ ಗಾಯ
Biker injured after falling dry tree
ಮುಂಡಗೋಡ 24 : ಮುಂಡಗೋಡ-ಬಂಕಾಪುರ ರಸ್ತೆಯಲ್ಲಿ ಮಂಗಳವಾರ ಒಣಗಿದ ಮರ ಅಕಸ್ಮಿಕವಾಗಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರನೊಬ್ಬ ಗಾಯಗೊಂಡಿದ್ದಾನೆ. ಸನವಳ್ಳಿ ಗ್ರಾಮದ ಕಿರಣ ಗುಬ್ಬಕ್ಕನವರ ಅವರು ಮುಂಡಗೋಡದಿಂದ ತಮ್ಮ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಪಾರ್ವತಿ ಪರಮೇಶ್ವರ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ. ಮರ ಬೀಳುವುದಕ್ಕೂ ಬೈಕ್ ಸಾಗುವುದಕ್ಕೂ ಒಂದೇ ಸಮಯದಲ್ಲಿ ನಡೆದ ಕಾರಣ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ಕಿರಣ ಗುಬ್ಬಕ್ಕನವರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೈಕ್ ಕಡಿಮೆ ವೇಗದಲ್ಲಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಹಲವೆಡೆ ಒಣಗಿದ ಮರಗಳು ಅಪಾಯಕಾರಿಯಾಗಿ ನಿಂತಿರುವುದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 