ಬೀಳಗಿ ತಾಲೂಕಾ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಸಭೆ
Bilagi Taluka Second PUC Result Improvement Meeting
ಬೀಳಗಿ 31: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬಾಗಲಕೋಟೆ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ಬೀಳಗಿ ತಾಲೂಕಾ ದ್ವಿತೀಯ ಪಿ.ಯು.ಸಿ. ಫಲಿತಾಂಶ ಸುಧಾರಣಾ ಸಭೆ ಜರುಗಿತು.
ಸಭೆಯನ್ನು ಉದ್ದೇಶಿಸಿ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಮಾತನಾಡಿ ರಾಷ್ಟ್ರ ನಿರ್ಮಾಣದ ಗುರುತರ ಜವಾಬ್ದಾರಿಯನ್ನು ಹೊತ್ತ ಬೋಧಕವೃಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಪಾಠ ಬೋಧನೆಯಲ್ಲಿ ಸೃಜನಾತ್ಮಕತೆಯನ್ನು ರೂಢಿಸಿಕೊಂಡು ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ವಿಷೇಶ ಕಾಳಜಿ ಮತ್ತು ಪರಿಶ್ರಮ ವಹಿಸಬೇಕೆಂದರು.
ನೋಡಲ್ ಪ್ರಾಚಾರ್ಯ ಪುಂಡಲೀಕ ಬಡಿಗೇರ, ಸಂಸ್ಥೆಯ ಆಡಳಿತಾಧಿಕಾರಿ ವ್ಹಿ. ಎಸ್. ಮೇಟಿ, ವಾಣಿಜ್ಯ ವಿಭಾಗದ ಪ್ರಾಚಾರ್ಯ ಜಿ. ಆರ್. ಪಾಟೀಲ, ವಿಜ್ಞಾನ ವಿಭಾಗದ ಪ್ರಾಚಾರ್ಯ ಎಮ್. ಬಿ. ವೆಂಕಟಾಪೂರ, ಹಾಗೂ ತಾಲೂಕಿನ ವಿವಿಧ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 