ಕೊಪ್ಪಳ 03: ಬಾಲ್ಯ ವಿವಾಹ ಪ್ರಕರಣಗಳಲ್ಲಿ ವಯಸ್ಸಿನ ಪ್ರಮಾಣ ತಿಳಿಯಲು ಶಾಲೆಯ ದಾಖಲಾತಿ ಪ್ರಮುಖವಾಗಿರುತ್ತದೆ. ಆದ್ದರಿಂದ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವಾಗ ಜನನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆದು ಅದರಲ್ಲಿರುವ ಜನ್ಮ ದಿನಾಂಕದ ಅನುಸಾರ ದಾಖಲಾತಿ ಮಾಡಿಕೊಳ್ಳಬೇಕು. ಈ ಕುರಿತು ಜಿಲ್ಲೆಯ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸುವಂತೆ ಸಂಬಂಧಿಸಿದ ಅಧಿಕಾರಿಗೆ ಅಪರ ಜಿಲ್ಲಾಧಿಕಾರಿ ಸೈಯದ ಆಯಿಶಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಶಾಲಾ ಆವರಣದಲ್ಲಿರುವ ವಿದ್ಯುತ್ ಕಂಬಗಳು, ಪರಿವರ್ತಕಗಳ ಕುರಿತು ಮಾಹಿತಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಿರಿ. ಶೀಘ್ರ ಸಂಪೂರ್ಣ ವಿವರವನ್ನೊಳಗೊಂಡ ಮಾಹಿತಿಯನ್ನು ಸಲ್ಲಿಸಬೇಕು. ಗ್ರಾಮೀಣ ಭಾಗದ ಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆ ಇದ್ದು, ಆ ಭಾಗದ ಸಮೀಪದ ಶಾಲೆಯ ವಿಷಯ ಶಿಕ್ಷಕರನ್ನು ವಾರದಲ್ಲಿ ಎರಡು ದಿನದಂತೆ ನಿಯೋಜನೆ ಮೇಲೆ ನೇಮಿಸಿ ವಿದ್ಯಾಥರ್ಿಗಳ ಶೈಕ್ಷಣಿಕ ವರ್ಷಕ್ಕೆ ತೊಂದರೆಯಾದಂತೆ ನಿಗಾವಹಿಸಿ. ಕೊಪ್ಪಳ ತಾಲ್ಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನ ವಿರುದ್ಧ ವಿದ್ಯಾಥರ್ಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪಕರ್ಿಸಿ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರಾದ ಅಮಿತಾ ಯರಗೋಳ್ಕರ್ ಅವರಿಗೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನೊಳಗೊಂಡ ವಿವರವನ್ನು ವಸತಿ ನಿಲಯದ ಗೋಡೆಯ ಮೇಲೆ ಬರೆಸುವುದು ಕಡ್ಡಾಯ. ಇದರಿಂದ ಮಕ್ಕಳಿಗೆ ಅವರ ಅಗತ್ಯದ ಸಂದರ್ಭದಲ್ಲಿ ಸಂಬಂಧಿಸಿದವರನ್ನು ಸಂಪಕರ್ಿಸಲು ಸಹಾಯವಾಗುತ್ತದೆ ಎಂದು ಅವರು ಹೇಳಿದರು. ಜಿಲ್ಲೆಯ ಮಕ್ಕಳ ಪಾಲನಾ ಸಂಸ್ಥೆಗಳು ತಮ್ಮಲ್ಲಿರುವ ಮಕ್ಕಳನ್ನು ಹೆಚ್ಚಿನ ಜವಾಬ್ದಾರಿ ಯಿಂದ ನೋಡಿಕೊಳ್ಳಬೇಕು. ಸಕರ್ಾರ ನೀಡುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆಹಾರ, ಸ್ವಚ್ಛತೆ ಹಾಗೂ ಸುರಕ್ಷತೆಗೆ ಹೆಚ್ಚು ಗಮನ ನೀಡಬೇಕು. ಮಹಿಳಾ ಬೌದ್ಧಿಕ ವಿಕಲಚೇತನರಿರುವ ಪಾಲನಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೇಲ್ವಿಚಾರಕರನ್ನು ನೇಮಕ ಮಾಡಿ ಅವರ ಸುರಕ್ಷತೆಗೆ ಆದ್ಯತೆ ನೀಡಿ ಎಂದು ಸಂಬಂಧಿಸಿದ ಪಾಲನಾ ಕೇಂದ್ರದ ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭ ಪಾಲನಾ ಸಂಸ್ಥೆಗಳ ಅಧಿಕಾರಿಗಳು ತಮ್ಮ ಸಂಸ್ಥೆಗಳಿಗೆ ಬೇಕಾದ ಅಗತ್ಯ ಸೌಕರ್ಯಗಳು ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚಚರ್ಿಸಿದರು. ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿವರವಾದ ವರದಿಯನ್ನು ನೀಡಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಆಯೋಜಿಸುವ ತರಬೇತಿ ಹಾಗೂ ಅರಿವು ಕಾರ್ಯಕ್ರಮಗಳಲ್ಲಿ ಮಕ್ಕಳ ಹಕ್ಕುಗಳು, ಲೈಂಗಿಕ ಅಫರಾದಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಹಾಗೂ ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015 ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಬೇಕು. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕ್ರಮಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕ ಈರಣ್ಣ ಪಂಚಾಳ ಅವರಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ವಿವಿಧ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.