ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತೋತ್ಸವ
Birth anniversary of Savitribai Phule, the mother of letters
ತಾಂಬಾ 04: 18ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ ವಿರುದ್ಧ ಹೋರಾಡಿ ಜ್ಞಾನ ದೀಪವನ್ನು ಹಚ್ಚಿದ ಸಾವಿತ್ರೀಬಾಯಿ ಫುಲೆ ಅವರು ಪೌರೋಹಿತ್ಯ ಸಮಾಜದಿಂದ ಅನೇಕ ಅವಮಾನಗಳನ್ನು ಸಹಿಸಿಕೊಂಡು ಪ್ರತಿಯೊಂದು ಹೆಣ್ಣು ಮಕ್ಕಳಿಗೂ ಅಕ್ಷರ ಜ್ಞಾನ ದೊರಕಿಸಿಕೊಡಲು ತಮ್ಮ ಸಂಪೂರ್ಣ ಜೀವನವನ್ನು ಶೈಕ್ಷಣಿಕ ಕ್ರಾಂತಿಗೆ ಅರ್ಿಸಿದರು ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಪ್ರಕಾಶ ಮುಂಜಿ ಹೇಳಿದರು.
ಗ್ರಾಮದ ಶ್ರೀ ಬಸವೇಶ್ವರ ಹೀರೀಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಾವೀತ್ರಿಬಾಯ ಫುಲೆ ಭಾರತದ ಮೋಲ ಮಹಿಳಾ ಶಿಕ್ಷಕಿ ತಮ್ಮ ಪತಿ ಜ್ಯೋತಿಬಾ ಫುಲೆ ಅವರೊಂದಿಗೆ ಬಾಲಕಿಯರ ಶಾಲೆಗಳನ್ನು ಸ್ಥಾಪಿಸಿ ಮಹಿಳಾ ಸಭಲಿಕರಣ ಮತ್ತು ಶಿಕ್ಷಣಕ್ಕಾಗಿ ಹೋರಾಡಿದ ಮಾಹಾನ್ ಚೈತನ್ಯ ಇವರಾಗಿದ್ದರು.
ಮುಖ್ಯ ಗುರುಮಾತೆ ಕವಿತಾ ಭರಮಣ ಮಾತನಾಡಿ ಸಾವಿತ್ರಿಬಾಯಿ ಫುಲೆ ಅವರ ಪರಿಶ್ರಮದಿಂದ ಇಂದು ಮಹಿಳೆಯರು ಎಲ್ಲಾ ರಂಗದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು. ಸಂಸ್ಥೆಯ ಅಧ್ಯಕ್ಷರಾದ ಮಾಹಾದೇವ ಮೂಲಿಮನಿ ಅಧ್ಯಕ್ಷತೆ ವಹಿಸಿದ್ದರು. ಕೆ.ಕೆ.ಕನ್ನೂರ, ಸೋಮಣ್ಣ ಮಾಶ್ಯಾಳ, ಡಾ.ಅರವಿಂದ ಮೇತ್ರಿ, ಹಣಮಂತ ಮಸಳಿ, ಪಿ.ಡಿ.ಕೆಂಗನಾಳ ಸೇರಿದಂತೆ ಮತ್ತಿತರರು ಇದ್ದರು. ಜೆ.ಎಚ್.ಹೂಗಾರ ಕಾರ್ಯಕ್ರಮ ನಿರ್ವಹಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 