ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಶೂಟರ್ ಬಂಧನ
Bishnoi gang's main shooter arrested
ನವದೆಹಲಿ: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಹಾಗೂ ಹರ್ಯಾಣ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಅಮನ್ ಭೈನ್ಸ್ವಾಲ್ನನ್ನು ಅಮೆರಿಕದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಬುಧವಾರ (ಜ. 7) ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಸಿಬಿಐ ಮತ್ತು ಹರ್ಯಾಣ ಪೊಲೀಸರ ತಂಡ ಆತನನ್ನು ವಶಕ್ಕೆ ಪಡೆದಿದೆ.
ಸಿಬಿಐ ಮತ್ತು ಇಂಟರ್ಪೋಲ್ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯು ಭಾರತೀಯ ತನಿಖಾ ಸಂಸ್ಥೆಗಳಿಗೆ ಸಿಕ್ಕ ದೊಡ್ಡ ಯಶಸ್ಸಾಗಿದೆ. ಹರ್ಯಾಣ ಪೊಲೀಸರ ಮನವಿಯ ಮೇರೆಗೆ ಈತನ ವಿರುದ್ಧ ಈ ಹಿಂದೆ 'ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್' ಹೊರಡಿಸಲಾಗಿತ್ತು. ಇದರ ಆಧಾರದ ಮೇಲೆ ಅಮೆರಿಕದ ಭದ್ರತಾ ಸಂಸ್ಥೆಗಳು ಆತನನ್ನು ಪತ್ತೆ ಹಚ್ಚಿ ಭಾರತಕ್ಕೆ ಹಸ್ತಾಂತರಿಸಿವೆ. ಅಮನ್ ಭೈನ್ಸ್ವಾಲ್ ವಿರುದ್ಧ ಕೊಲೆ, ಗಲಭೆ ಸೃಷ್ಟಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ.
ಈ ಹಿಂದೆ ಭಾರತದಲ್ಲಿ ಬಂಧನಕ್ಕೊಳಗಾಗಿದ್ದ ಈತ, ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಆದರೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಸಂಘಟಿತ ಅಪರಾಧ ಗ್ಯಾಂಗ್‌ನ ಪ್ರಮುಖ ಸದಸ್ಯನಾಗಿದ್ದು, ವಿದೇಶದಲ್ಲಿ ಕುಳಿತು ಗ್ಯಾಂಗ್‌ನ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ಎನ್ನಲಾಗಿದೆ.
ಆರೋಪಿಯನ್ನು ಯಶಸ್ವಿಯಾಗಿ ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು, ಜ. 7 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಹರ್ಯಾಣ ಪೊಲೀಸರು ಆತನನ್ನು ಬಂಧಿಸಿದ್ದಾರೆ" ಎಂದು ಸಿಬಿಐ ವಕ್ತಾರರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಹರ್ಯಾಣಕ್ಕೆ ಕರೆದೊಯ್ಯಲಾಗಿದ್ದು, ಗ್ಯಾಂಗ್‌ನ ಇತರ ಸದಸ್ಯರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 