ರಕ್ತದಾನದಿಂದ ದೇಹ ಮನಸ್ಸು ಆರೋಗ್ಯಯುತ ಡಾ.ಎ ಎಂ ಸೌಧಾಗರ
Blood donation keeps the body and mind healthy Dr. A. M. Soudhagar
ಬ್ಯಾಡಗಿ 21 : ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಆರೋಗ್ಯ ಸಮಿತಿ ಸದಸ್ಯರು ಸಾರ್ವಜನಿಕ ಆಸ್ಪತ್ರೆ ಬ್ಯಾಡಗಿ ಹಾಗೂ ಮಾಜಿ ಅಂಜುಮನ್ ಇಸ್ಲಾಂ ಕಮಿಟಿಯ ಅಧ್ಯಕ್ಷರು ಡಾಕ್ಟರ್ ಎ ಎಂ ಸೌಧಾಗರ್ ಹೇಳಿದರು.ಪಟ್ಟಣದ ಟಿಪ್ಪು ಸುಲ್ತಾನ್ ಜಯಂತಿ ನಿಮಿತ್ತ ಇಂದು ಚಮನ್ ಶಾವಲಿ ದರ್ಗಾದಲ್ಲಿ, ರಾಣೆಬೆನ್ನೂರು ಬ್ಲಡ್ಬ್ಯಾಂಕ್ ಘಟಕದ ಸಹಯೋಗದಲ್ಲಿ ಏರಿ್ಡಸಲಾದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಎಲ್ಲಾ ದಾನಕ್ಕಿಂತ ಶ್ರೇಷ್ಠದಾನ ರಕ್ತದಾನವಾಗಿದ್ದು ರಕ್ತದಾನದಿಂದ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ.
ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು. ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೆಸೀಮೆ ಮಾತನಾಡಿ ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಧಾರ್ಮಿಕ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಿದರೆ ದೇಶದಲ್ಲಿನ ರಕ್ತದ ಕೊರತೆ ನೀಗಿಸಬಹುದು. ಧಾರ್ಮಿಕ ಕೇಂದ್ರಗಳು ಪೂಜೆ ಪ್ರಾರ್ಥನೆಗಳಿಗೆ ಸೀಮಿತವಾಗಿರದೆ ಸಮಾಜಮುಖಿಯಾಗಿ ಸ್ಪಂದಿಸಬೇಕು ಎಂದರು.30 ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಣೆಯಿಂದ ರಕ್ತದಾನವನ್ನು ಮಾಡಿದರು. ಈ ಸಂದರ್ಭದಲ್ಲಿ ಮುಖಂಡ ದುರ್ಗೇಶ್ ಗೋಣೆಮ್ಮನವರ್ , ಗೀರೀಶ್ ಇಂಡಿಮಠ,ಜೆ ಎಂ ಖಾಜಿ, ಮಜೀದ ಮುಲ್ಲಾ, ಭಾಷಾ ಸಾಬ್ ಮುಲ್ಲಾ,ರಫೀಕ್ ಅಹ್ಮದ್ ಮುದ್ಗಲ್, ರೆಹಮತ್ ಹಿತ್ತಲಮನಿ. ಹಾಗೂ ಅನೇಕರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 