ಬೊಮ್ಮಾಯಿ 65 ನೇ ಜನ್ಮದಿನಾಚರಣೆ ನಿಮಿತ್ಯ ಕಣ್ಣಿನ, ಆರೋಗ್ಯ ತಪಾಸಣೆ ್ಘ ರಕ್ತದಾನ ಶಿಬಿರ
ಶಿಗ್ಗಾವಿ 25: ಪಟ್ಟಣದ ಸವಣೂರ ರಸ್ತೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದವತಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ 65 ನೇ ಜನ್ಮದಿನಾಚರಣೆ ಅಂಗವಾಗಿ ಜ. 28 ರಂದು ಮಂಗಳವಾರ ಬೆಳಿಗ್ಗೆ 09-00 ಗಂಟೆ ಇಂದ ಮಧ್ಯಾಹ್ನ 02-00 ಗಂಟೆವರೆಗೆ ನುರಿತ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ತಪಾಸಣೆ ಹಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದವತಿಯಿಂದ ಪ್ರಕಟಣೆಗೆ ಕೋರಿದ್ದಾರೆ.