ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

Bommai consoled the family members

ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ  

ಶಿಗ್ಗಾವಿ  23: ಯಲ್ಲಾಪುರ ಸಮೀಪ ಅರಬೈಲ್ ಘಾಟ್ ಹತ್ತಿರ ಟ್ರಕ್ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ 10 ಜನರು ನಿಧನರಾಗಿದ್ದು, ಇಂದು ಅವರ ಕುಟುಂಬಗಳಿಗೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ರವರು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.