ಗ್ರಾಮೀಣ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿಗೆ ಬೂಸ್ಟರ್ ತರಗತಿ ಸಹಕಾರಿ
Booster classes help boost the confidence of rural students
ಹೂವಿನಹಡಗಲಿ: 08- ಗ್ರಾಮೀಣ ವಿದ್ಯಾರ್ಥಿಗಳಿಗೆ ಕಷ್ಟ ಎನಿಸುವ ಇಂಗ್ಲಿಷ್ ವಿಷಯದ ಬಗ್ಗೆ ಆತ್ಮವಿಶ್ವಾಸ ಮೂಡಿಸಲು ಬೂಸ್ಟರ್ ತರಗತಿಗಳು ಸಹಕಾರಿಯಗಳಿವೆ ಎಂದು ಸೊ. ಕಾ. ಬಾಲಕಿಯರ ಸ. ಪ. ಕಾಲೇಜಿನ ಪ್ರಾಚಾರ್ಯ ಎ. ಕೊಟ್ರಗೌಡ ಅಭಿಪ್ರಾಯಪಟ್ಟರು. ತಾಲೂಕಿನ ಸೋಗಿ ಗ್ರಾಮದ ಪಟ್ಟೇದ ಸಿದ್ಧಮಲ್ಲಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಗಿ ಹಾಗೂ ಉತ್ತಂಗಿ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಯ ಆಯೋಜಿಸಿದ್ದ ಇಂಗ್ಲಿಷ್ ಬೂಸ್ಟರ್ ತರಗತಿ ಉದ್ಘಾಟಿಸಿ ಅವರು ಮಾತನಾಡಿದರು. ನಗರ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಮಕ್ಕಳಿಗೆ ಮೂಲಭೂತ ಕಲಿಕೆಗೆ ಅವಕಾಶಗಳು ಕಡಿಮೆ ಸಿಗುತ್ತವೆ.
ಇಂತಹ ಸಂದರ್ಭದಲ್ಲಿ ಪೂರಕ ಬೋಧನೆ ನೀಡುವ ಬೂಸ್ಟರ್ ತರಗತಿಗಳು ಅವರಿಗೆ ಹೊಸ ದಿಕ್ಕನ್ನು ತೋರಿಸುತ್ತವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಎಸ್. ಜ್ಯೋತಿ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕರೆ ಅವರು ಕೂಡ ನಗರದ ವಿದ್ಯಾರ್ಥಿಗಳಂತೆ ಸಾಧನೆ ಮಾಡಲು ಸಮರ್ಥರಾಗಿದ್ದಾರೆ ಎಂದು ಹೇಳಿದರು. ಉತ್ತಂಗಿ ಕಾಲೇಜಿನ ಪ್ರಾಚಾರ್ಯ ಕಲ್ಲನಗೌಡ್ರ ಪ್ರಕಾಶ್, ಸೋಗಿ ಕಾಲೇಜಿನ ಉಪನ್ಯಾಸಕರಾದ ಶಬೀನ, ನರೇಶ್, ಪರಶುರಾಮ ನಾಗೋಜಿ, ಜಯಪ್ರಕಾಶ್, ನಟರಾಜ್ ಭಾಗವಹಿಸಿದ್ದರು. ಎರಡೂ ಕಾಲೇಜಿನ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೂಸ್ಟರ್ ತರಗತಿಯ ಪ್ರಯೋಜನ ಪಡೆದುಕೊಂಡರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 