ಬಾಲಕ ರೆಹಾನಖಾನಗೆ ಪೊಲೀಸ್ ವರಿಷ್ಠಾಧಿಕಾರಿಯಿಂದ ಸನ್ಮಾನ
Boy Rehan Khana honored by Superintendent of Police
ತಾಳಿಕೋಟಿ 29: ಸಮೀಪದ ಕೊಡೆಕಲ್ಲ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಿರಿಯ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಅಯ್ಯೂಬ ಖಾನ್ ಇವರ ಏಳು ವರ್ಷದ ಮಗನಾದ ರೆಹಾನಖಾನ್ ಈತನು ಸೈಡ್ ಸಿಟ್ ಅಪ್ ನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಕ್ಕಾಗಿ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಾಲಕ ರೆಹಾನ್ ಖಾನ್ ನನ್ನು ತಮ್ಮ ಕಾರ್ಯಾಲಯಕ್ಕೆ ಆಮಂತ್ರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ನಮ್ಮ ಇಲಾಖೆಯ ಸಿಬ್ಬಂದಿಯ ಮಗನ ಈ ಸಾಧನೆ ನಮ್ಮೆಗೆಲ್ಲರಿಗೂ ಹೆಮ್ಮೆಯೆ ವಿಷಯವಾಗಿದೆ ಅವನು ಜೀವನದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸುತ್ತೇನೆ, ಕ್ರೀಡೆಯೊಂದಿಗೆ ಶಿಕ್ಷಣಕ್ಕೂ ಅಷ್ಟೇ ಮಹತ್ವ ನೀಡಬೇಕೆಂದು ನಾನು ಬಾಲಕನ ತಂದೆಗೆ ಹೇಳಲು ಬಯಸುತ್ತೇನೆ ಎಂದರು. ಈ ಸಮಯದಲ್ಲಿ ಬಾಲಕ ರೆಹಾನ್ ಖಾನ್ ತಂದೆಯಾದ ಅಯ್ಯೂಬಖಾನ್, ತರಬೇತುದಾರ ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 