ಸೆ.7ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಸೆ. 17ರಂದು ವಿಶ್ವಕರ್ಮ ಜಯಂತಿ ಆಚರಣೆ
Brahmashri Narayana Guru on Sept. 7 and Vishwakarma Jayanti on Sept. 17
ಸೆ.7ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಸೆ. 17ರಂದು ವಿಶ್ವಕರ್ಮ ಜಯಂತಿ ಆಚರಣೆ
ವಿಜಯಪುರ 02: ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರು ಅವರು ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಹಾಗೂ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30ಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ವಿವಿಧ ಕಲಾ ತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾರೋಪಗೊಳ್ಳುವುದು. ಅದೇ ದಿನ ಬೆಳಿಗ್ಗೆ 10:30ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರಿ್ಡಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಅಂಗವಾಗಿ ಸಿದ್ಧೇಶ್ವರ ದೇವಸ್ಥಾನದಿಂದ ಅವರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಿಗ್ಗೆ 10:30 ಕ್ಕೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರಿ್ಡಸಲು ನಿರ್ಧರಿಸಲಾಯಿತು. ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸಿ, ದೀಪಾಲಂಕಾರ ಹಾಗೂ ವೇದಿಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆಯನ್ನು ಸಮರ್ಕವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಶಾಂತ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಪೊಲೀಸ್ ಇನ್ಸಪೆಕ್ಟರ್ ರವಿ ಯಡವನ್ನವರ, ಹನಮಂತ ಸಿದ್ದಪ್ಪ ಈಳಿಗೇರ, ಶಿವಾನಂದ ಈಳಿಗೇರ, ಶ್ರೀಕಾಂತ ಕುಂದನಗಾರ, ಬಾಳು ಪ್ರದೀಪ ಎಂ.ಕೆ ಪತ್ತಾರ,ಪ್ರಮೋದ ಬಡಿಗೇರ ಅಶೋಕ ಪತ್ತಾರ, ಮಹೇಂದ್ರ ಸ್ವಾಮಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 