ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ ಲಸಿಕೆಯಾಗಿದೆ
Breast milk is the first vaccine given to a baby by a mother.
ಕೊಪ್ಪಳ 04: ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ ಲಸಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹೇಳಿದರು.
.ಪ್ರತಿ ವರ್ಷ ಆಗಸ್ಟ್ ಮೊದಲನೇ ವಾರ (1-7ನೇ ದಿನ)ದಲ್ಲಿ “ವಿಶ್ವ ಸ್ತನ್ಯಪಾನ ಸಪ್ತಾಹ” ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಉದ್ದೇಶ ತಾಯಿಯ ಎದೆಹಾಲು ಶಿಶುವಿಗೆ ನೀಡುವ ವಿಧಾನಗಳ ಬಗ್ಗೆ ಗರ್ಭಿಣಿ, ಬಾಣಂತಿಯರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ.
ತಾಯಿ ಎದೆಹಾಲು ನೀಡುವುದುರಿಂದ ಮಗುವಿನ ಸರ್ವತೋಮಕ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಅದು ಮಗುವಿಗೆ ನೀಡುವ ಮೊದಲ ಲಸಿಕೆಯಾಗಿದೆ. ಎದೆಹಾಲು ಕುಡಿಸುವುದರಿಂದ ತಾಯಿ ಮತ್ತು ಮಗುವಿಗೆ ಬಹಳಷ್ಟು ಉಪಯುಕ್ತವಾಗುತ್ತದೆ. ತಾಯಿ ಮತ್ತು ಮಗುವಿನ ಬಾಂದವ್ಯ ಹೆಚ್ಚಾಗುತ್ತದೆ. ತಾಯಿಯ ಎದೆಹಾಲು ನೀಡುವುದರಿಂದ ಎದೆ ಕ್ಯಾನ್ಸರ್ ಬರುವುದಿಲ್ಲ. ಮಗುವಿಗೆ ಬೇಕೆಂದಾಗ ಸಿಗುತ್ತದೆ. ಮಗುವಿಗೆ ಯಾವುದೇ ಕಾರಣಕ್ಕೂ ಬಾಟಲಿ ಹಾಲನ್ನು ನೀಡಬಾರದು. ಒಂದು ವೇಳೆ ಬಾಟಲಿ ಹಾಲನ್ನು ನೀಡಿದರೆ ಮಗುವಿಗೆ ಅತಿಸಾರ ಭೇದಿ ಉಂಟಾಗುವ ಸಾಧ್ಯತೆ ಇರುತ್ತದೆ. ಪ್ರತಿ ತಾಯಿಯು ತನ್ನ ಮಗುವಿಗೆ ದಿನಕ್ಕೆ 10 ರಿಂದ 12 ಬಾರಿ ಎದೆಹಾಲು ನೀಡಬೇಕು.
ತಾಯಿಯ ಎದೆಹಾಲು ನೀಡುವುದರಿಂದ ಯಾವುದೇ ರೀತಿಯ ಅಪೌಷ್ಠಿಕತೆ, ನಿಮೋನಿಯಾ ಹಾಗೂ ಇತರೆ ಖಾಯಿಲೆಗಳು ಹರಡದಂತೆ ರಕ್ಷಣೆ ನೀಡುತ್ತದೆ. ಮಗುವಿನ ತೂಕವೂ ಹೆಚ್ಚಾಗುತ್ತದೆ. ಇದರಿಂದ ಅಪೌಷ್ಠಿಕ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಾದ ಪುಷ್ಪಾ, ಅಶ್ವಿನಿ, ಅನ್ನಪೂರ್ಣ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳಾದ ಶ್ರೀದೇವಿ, ಶರಣಮ್ಮ ಸೇರಿದಂತೆ ಗರ್ಭಿಣಿಯರು, ಭಾಣಂತಿಯರು, ಕಿಶೋರಿಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 