ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂತಗಳು ಜೀವನ ಪರಿಪೂರ್ಣತೆಗೆ ದಾರಿ : ಸತೀಶ ಜಾರಕಿಹೊಳಿ
Buddha, Basava, Ambedkar theories are the way to perfection of life : Satish Jarakiholi
ರಾಣೆಬೇನ್ನೂರ 03 : ಸಮಾಜದಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಸೇರಿ ಎಲ್ಲ ದಾರ್ಶನಿಕರ ಮೂತಿರ್ಗಳ ಪ್ರತಿಷ್ಠಾಪನೆ ಮಾಡುವ ಮೂಲಕ ಇಂದಿನ ಮಕ್ಕಳಿಗೆ ಅವರ ತತ್ವಾದರ್ಶಗಳ ಕುರಿತು ಅರಿವು ಮೂಡಿಸಬೇಕು. ಆ ಮೂಲಕ ಮಕ್ಕಳನ್ನು ಸಮಾಜದಲ್ಲಿ ಸಂಸ್ಕಾರವಂತರನ್ನಾಗಿ ಮಾಡಲು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ತಾಲೂಕಿನ ವೈ.ಟಿ. ಹೊನ್ನತ್ತಿ ಗ್ರಾಮದ ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಷ್ಠಾಪಿಸಿದ ವೀರಮದಕರಿ ನಾಯಕರ ಮೂತಿರ್ಯನ್ನು ಅನಾವರಣಗೊಳಿಸಿ ಮಾತನಾಡಿದರು. ಯಾವ ಮಕ್ಕಳು ಇತಿಹಾಸ ಓದಿ ತಿಳಿದುಕೊಳ್ಳುತ್ತಾರೋ ಅವರು ಇತಿಹಾಸ ಸೃಷ್ಟಿಸುತ್ತಾರೆ. ವೀರಮದಕರಿ ನಾಯಕ ಸೇರಿ ಎಲ್ಲ ದಾರ್ಶನಿಕರು ನಿಮಗೆಲ್ಲ ದಾರೀದೀಪವಾಗಬೇಕು. ಎಲ್ಲ ಸಮಾಜದ ಜನತೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಮಹತ್ವ ಹೆಚ್ಚಿಸಲು ವಸತಿ ಶಾಲೆಗಳನ್ನು ತೆರೆಯಲಾಗಿದೆ. ಅವುಗಳ ಬಳಕೆ ಮಾಡಿಕೊಳ್ಳಬೇಕು.
ಸ್ವಾತಂತ್ರ್ಯ ಪೂರ್ವ ಇಲ್ಲದ ಶಿಕ್ಷಣವನ್ನು ಸಂವಿಧಾನ ಬಂದ ಮೇಲೆ ಶಿಕ್ಷಣ ಕಲಿಯಲು ಅವಕಾಶ ಪ್ರತಿಯೊಬ್ಬರಿಗೆ ದೊರೆತಿದೆ. ಮಠಗಳ ಮೂಲಕವೂ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ನಡೆಯುತ್ತಿದೆ. ವಾಲ್ಮೀಕಿ ಸಮಾಜದಿಂದಲೂ ತಿಂಥಣಿಯಲ್ಲಿ 18 ಎಕರೆ ಜಾಗದಲ್ಲಿ ಮಠ ನಿಮಿರ್ಸಲಾಗುತ್ತಿದ್ದು, ಇದರ ಉದ್ದೇಶ ಮಕ್ಕಳಿಗೆ ಶಿಕ್ಷಣ ಕೊಡುವುದಾಗಿದೆ ಎಂದರು. ಭವ್ಯ ಸಮಾರಂಭ ಉದ್ಘಾಟಿಸಿದ ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಎಲ್ಲ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಎಸ್ಟಿಯವರಿಗೆ ಶೇ. 7ರಷ್ಟು ಮೀಸಲಾತಿ ನೀಡಿತ್ತು. ಆದರೀಗ ಉದ್ಯೋಗದಲ್ಲಿ ಕೇವಲ ಶೇ. 3ರಷ್ಟು ಮಾತ್ರ ನೀಡಲಾಗುತ್ತಿದೆ. ಆದ್ದರಿಂದ ಸಚಿವ ಸತೀಶ ಜಾರಕಿಹೊಳಿಯವರು ಉದ್ಯೋಗದಲ್ಲೂ ಶೇ. 7ರಷ್ಟು ಮೀಸಲಾತಿ ಕೊಡಿಸಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು. ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸಿದ್ದರು.
ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಶಾಸಕ ಅರುಣಕುಮಾರ ಪೂಜಾರ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜಣ್ಣ ಮೋಟಗಿ, ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಚಂದ್ರಣ್ಣ ಬೇಡರ, ಮಹಷಿರ್ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಚಂದ್ರು ಬನ್ನಿಹಟ್ಟಿ, ಸಂತೋಷಕುಮಾರ ಪಾಟೀಲ, ರವೀಂದ್ರಗೌಡ ಪಾಟೀಲ, ಹನುಮಂತಪ್ಪ ಮೀನಕಟ್ಟಿ, ದರ್ಶನ ಲಮಾಣಿ, ಏಳುಕೋಟೆಪ್ಪ ಬ್ಯಾಡಗಿ, ಮಂಜುನಾಥ ಓಲೇಕಾರ, ಬಸವರಾಜ ಚಳಗೇರಿ, ಪುಟ್ಟಪ್ಪ ಮರಿಯಮ್ಮನವರ ಹಾಗೂ ವಾಲ್ಮೀಕಿ ಸಮಾಜದ ಜಿಲ್ಲಾ, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 