ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಅನ್ಯಾಯ: ನಾಗೇಶ ಹೆಗಡ್ಯಾಳ
Budget is unfair to the majority: Nagesh Hegdyala
ಲೋಕದರ್ಶನ ವರದಿ
ಇಂಡಿ 06 : ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಬಹುಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಇಂಡಿ ತಾಲೂಕಿನ ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸನಾತನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಯಾವುದೇ ರೀತಿಯ ಅನುದಾನ ಮೀಸಲಿಟ್ಟಿಲ್ಲ, ಉತ್ತರ ಕರ್ನಾಟಕದ ಪ್ರವಾಸೋದ್ಯಮ ಹಾಗೂ ನೀರಾವರಿ ಯೋಜನೆಗಳಿಗೆ ಮಹತ್ವ ನೀಡಿಲ್ಲ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಹೇಳಿದರು.ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆದಾಯ ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಕಡಿವಾಣ ಹಾಕಿ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್ ನಲ್ಲಿ ಒತ್ತು ನೀಡಬೇಕಿತ್ತು. ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 