ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ

ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ  Bus accident: Over 20 people injured

ಲಕ್ಷ್ಮೇಶ್ವರ, ಜು. 4: ಸಮೀಪದ ಶಿಗ್ಲಿ ಹಾಗೂ ದೊಡ್ಡರು ರಸ್ತೆಯಲ್ಲಿ ಶನಿವಾರ ಖಾಸಗಿ ಬಸ್ವೊಂದು ಬ್ರೇಕ್ ವೈಫಲ್ಯಗೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೆಲವರಿಗೆ ತಲೆ, ಎದೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಗಾಯಾಳುಗಳಿಗೆ ಮೊದಲಿಗೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.  ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.