ಬಸ್ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bus accident: Over 20 people injured
ಲಕ್ಷ್ಮೇಶ್ವರ, ಜು. 4: ಸಮೀಪದ ಶಿಗ್ಲಿ ಹಾಗೂ ದೊಡ್ಡರು ರಸ್ತೆಯಲ್ಲಿ ಶನಿವಾರ ಖಾಸಗಿ ಬಸ್ವೊಂದು ಬ್ರೇಕ್ ವೈಫಲ್ಯಗೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೆಲವರಿಗೆ ತಲೆ, ಎದೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳಿಗೆ ಮೊದಲಿಗೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 