ಪಾದಚಾರಿಗಳ ಮೇಲೆ ಹರಿದ ಬಸ್': 4 ಮೃತ್ಯು, 9 ಗಾಯ
Bus runs over pedestrians: 4 dead, 9 injured
ಮುಂಬೈ: ಸೋಮವಾರ ತಡರಾತ್ರಿ ಮುಂಬೈನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಪಾದಚಾರಿಗಳ ಮೇಲೆ ಬೆಸ್ಟ್ ಬಸ್ ಹರಿದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮುಂಬೈನ ಭಾಂಡುಪ್ ಪ್ರದೇಶದಲ್ಲಿ ಸಂಭವಿಸಿದೆ.
ಮುಂಬೈನ ಭಾಂಡುಪ್ (ಪಶ್ಚಿಮ) ರೈಲ್ವೇ ನಿಲ್ದಾಣದ ಸಮೀಪವಿರುವ ಬಿಜಿ ಸ್ಟೇಷನ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು. ಬಸ್ ತನ್ನ ಮಾರ್ಗದ ಕೊನೆಯ ನಿಲ್ದಾಣಕ್ಕೆ ತಲುಪಿದ್ದು ಈ ವೇಳೆ ಚಾಲಕ ಬಸ್ಸನ್ನು ರಿವರ್ಸ್ ತೆಗೆಯುವಾಗ ನಿಯಂತ್ರಣ ಕಳೆದುಕೊಂಡು ವೇಗವಾಗಿ ಚಲಿಸಿದ ಪರಿಣಾಮ ರಸ್ತೆ ಬದಿಯಲ್ಲಿ ಬಸ್ಗಾಗಿ ಕಾಯುತ್ತಿದ್ದ ಮತ್ತು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಈ ಕುರಿತು 'X' ನಲ್ಲಿ ಪೋಸ್ಟ್ ಮಾಡಿರುವ ಅವರು, ಘಟನೆ "ಅತ್ಯಂತ ದುರದೃಷ್ಟಕರ" ಎಂದು ಹೇಳಿಕೊಂಡಿದ್ದಾರೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 