ಅಂಗನವಾಡಿ ಅಸ್ವಚ್ಛತೆಗೆ ಸಿಇಒ ನೋಟಿಸ್
CEO issues notice over unhygienic conditions at Anganwadi
ಬಾಗಲಕೋಟೆ, ಸೆ.16: ನಗರದ ವಾಂಬೆ ಕಾಲೋನಿಯ ಅಂಗನವಾಡಿ ಕೇಂದ್ರ ಸಂಖ್ಯೆ-2ಕ್ಕೆ ಅನೀರೀಕ್ಷಿತ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಅವರು, ಕೇಂದ್ರದ ಮುಂಭಾಗದಲ್ಲಿ ಚರಂಡಿ ಕಟ್ಟಿಕೊಂಡು ಕೊಳಚೆ ನೀರು ನಿಂತಿರುವುದು ಹಾಗೂ ತೀವ್ರ ಅಸ್ವಚ್ಛತೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸಣ್ಣ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕಾಗಿದ್ದು, ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಸಿಡಿಪಿಒ, ವೃತ್ತ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಸ್ಥಳದಲ್ಲಿಯೇ ಶೋಕಾಸ್ ನೋಟಿಸ್ ಜಾರಿಗೊಳಿಸಿದರು. ಚರಂಡಿ ತಡೆಯನ್ನು ತಕ್ಷಣ ತೆರವುಗೊಳಿಸಿ, ಅಂಗನವಾಡಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ವಾಂಬೆ ಕಾಲೋನಿ ಹಾಗೂ ಸೆಟಲ್ಮೆಂಟ್ ಕಾಲೋನಿಯ ನಮ್ಮ ಕ್ಲಿನಿಕ್ಗಳಿಗೆ ಭೇಟಿ ನೀಡಿದ ಸಿಇಒ, ಓಷಧಗಳ ದಾಸ್ತಾನು, ರೋಗಿಗಳ ನೋಂದಣಿ, ಚಿಕಿತ್ಸಾ ಸೌಲಭ್ಯ ಮತ್ತು ನೈರ್ಮಲ್ಯ ವ್ಯವಸ್ಥೆ ಪರೀಶೀಲಿಸಿದರು. ಸಾರ್ವಜನಿಕರಿಗೆ ನಿರಂತರ ಆರೋಗ್ಯ ಸೇವೆ ಒದಗಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ಬಳಿಕ ನವನಗರದ ಸೆಕ್ಟರ್ 41ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.10ಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳ ಕಲಿಕಾ ಮಟ್ಟ ಪರೀಶೀಲಿಸಲು ಗಣಿತ ಲೆಕ್ಕಗಳನ್ನು ನೀಡಿದ ಅವರು, ಶಾಲಾ ಕಟ್ಟಡದ ಬಲ ಹಾಗೂ ಸ್ಥಿರತೆಯನ್ನೂ ಪರೀಶೀಲಿಸಿದರು.
ಸರ್ಕಾರಿ ಸಂಸ್ಥೆಗಳಲ್ಲಿ ಸೇವಾ ಗುಣಮಟ್ಟ, ಸ್ವಚ್ಛತೆ ಮತ್ತು ಅಗತ್ಯ ಮೂಲಸೌಲಭ್ಯಗಳ ಸಮರ್ಕ ನಿರ್ವಹಣೆಗೆ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಸಿಇಒ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 