ವಸ್ತುಪ್ರದರ್ಶನ ಮಳಿಗೆಗಳಿಗೆ ಸಿಇಒ ಭೇಟಿ
CEO visits exhibition stands
ಕಾರಟಗಿಯ ಶ್ರೀಸಿದ್ದೇಶ್ವರ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಮಳಿಗೆಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ವರ್ಣಿತ್ ನೇಗಿ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಅವರು ಈಗಿನ ಮಕ್ಕಳಲ್ಲಿರುವ ಪ್ರತಿಭೆಯನ್ನು ನಾವು ಊಹಿಸಲೂ ಸಾಧ್ಯವಿಲ್ಲ. ಅಂತಹ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಪ್ರದರ್ಶಿಸಲು ಇಂತಹದೊಂದು ವೇದಿಕೆ ಪ್ರಮುಖವಾಗಿದೆ ಎಂದು ಹೇಳಿದರು. ಪಟ್ಟಣದ ಶ್ರೀ ಸಿದ್ದೇಶ್ವರ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹಾಕಲಾಗಿರುವ ವಸ್ತುಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಕಲೆಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳೊಂದಿಗೆ ಸಂಬಂಧಪಟ್ಟ ಕಲೆಗಳ ಬಗ್ಗೆ ಮಾಹಿತಿ ಪಡೆದು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕಲೆಗಳನ್ನು ಪ್ರದರ್ಶಿಸಲು ಸಲಹೆ ನೀಡಿ ಪ್ರೋತ್ಸಾಹಿಸಿದರು.
ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆ ಅಲಂಕರಿಸಿ ಸದೃಢ ದೇಶ ನಿರ್ಮಾಣ ಮಾಡಬೇಕು. ಮಕ್ಕಳ ಜೀವನದಲ್ಲಿ ಬಾಲ್ಯಾವಸ್ಥೆ ಅತ್ಯುತ್ತಮ ಕ್ಷಣವಾಗಿರುತ್ತದೆ. ಶಿಕ್ಷಕರ ವೃತ್ತಿ ಪವಿತ್ರವಾಗಿದೆ ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ಶಿಕ್ಷಕರು. ಬಾಲ್ಯದಲ್ಲಿನ ಶಿಕ್ಷಣ, ನೃತ್ಯ, ಸಂಗೀತ, ಚಿತ್ರಕಲೆ ಮುಂತಾದ ಕಲೆಗಳನ್ನು ಕಲಿತುಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಕುಮಾರಸ್ವಾಮಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ, ಪುರಸಭೆ ಅಧ್ಯಕ್ಷರು, ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ, ತಾಲೂಕು ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 