ವಿದ್ಯಾರ್ಥಿ ಗಳ ಫಲಿತಾಂಶ ಸುಧಾರಣೆಗೆ ಸಿಇ ಟಿ ತರಬೇತಿ
CET training to improve student results
ಹೂವಿನ ಹಡಗಲಿ: 14- ಸರಕಾರಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ಬಾರಿ ವಸತಿ ಸಹಿತ ಉಚಿತ ಸಿ ಇ ಟಿ ತರಬೇತಿಯನ್ನು ಇಲಾಖೆ ಆಯೋಜಿಸಿದೆ.ಎಲ್ಲಾ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಪ್ರಾಚಾರ್ಯ ಎ. ಕೊಟ್ರಗೌಡ ತಿಳಿಸಿದರು. ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸ.ಪ.ಪೂ. ಕಾಲೇಜಿನಲ್ಲಿ ಭಾನುವಾರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಯ ಭಾಗವಾಗಿ ಆಯೋಜಿಸಿದ್ದ ಜೀವಶಾಸ್ತ್ರ ವಿಷಯದ ಬೂಸ್ಟರ್ ತರಗತಿ ಉದ್ಘಾಟಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿ ಎಂ.ಎಂ.ಪಾಟೀಲ ಕಾಲೇಜಿನ ಪ್ರಾಚಾರ್ಯ ಡಿ. ಸತೀಶ್, ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಗೆ ಒತ್ತುಕೊಟ್ಟು ಓದುವ ಬಗ್ಗೆ ಮಾರ್ಗದರ್ಶನ ಮಾಡಿದರು. ಜೊತೆಗೆ ಸಿ. ಇ. ಟಿ ತಯಾರಿ ಕುರಿತು ಉಪಯುಕ್ತವಾದ ಮಾಹಿತಿ ಒದಗಿಸಿದರು. ಉಪನ್ಯಾಸಕ ನಟರಾಜ್ ಪಾಟೀಲ್ ,ಶ್ರೀಕಾಂತ್, ದುಷ್ಯಂತ್, ವೀರೇಶ್, ಶಂಕರ್, ಪರಂಜ್ಯೋತಿ, ಉಮಾ, ರಶ್ಮಿ ಇದ್ದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 