'ನಾನು ಇಲ್ಲಿವರೆಗೆ ಬಂದಿದ್ದೇನೆ ಅದು ಜನರ ಆಶೀರ್ವಾದಿಂದ ಅಷ್ಟೇ' ಎಂದ ಸಿಎಂ ಸಿದ್ದರಾಮಯ್ಯಗೆ ದೀರ್ಘಾವಧಿ ಆಯ್ತು ಈಗ ಪೂರ್ಣಾವಧಿ ಆಸೆ
CM Siddaramaiah says, 'I have come this far only with the blessings of the people', but now he want
ಮೈಸೂರು: ನಾನು ಇಲ್ಲಿಯವರೆಗೆ ಬಂದಿದ್ದೇನೆ ಎಂದರೆ ಅದು ಕೇವಲ ಜನರ ಆಶೀರ್ವಾದದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು "ನಾನು ದೇವರಾಜ ಅರಸು ಅವರ ದಾಖಲೆ ಮುರಿಯಬೇಕು ಎಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದವನಲ್ಲ. ಆ ದಾಖಲೆಯ ಬಗ್ಗೆ ನನಗೆ ಅರಿವೂ ಇರಲಿಲ್ಲ. ಜನರ ಆಶೀರ್ವಾದದಿಂದ ಎಲ್ಲವೂ ತಾನಾಗಿಯೇ ನಡೆದು ಹೋಗಿದೆ" ಎಂದು ಸಿಎಂ ತಿಳಿಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ, "ನನಗೆ ಹೈಕಮಾಂಡ್ ಮೇಲೆ ಪರಿಪೂರ್ಣ ವಿಶ್ವಾಸವಿದೆ. ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವ ಭರವಸೆ ನನಗಿದೆ" ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು. ಜೊತೆಗೆ ಅಧಿಕಾರ ಹಂಚಿಕೆ ಮತ್ತು ರಾಜಕೀಯ ಬದಲಾವಣೆಗಳ ಕುರಿತು ಮಾತನಾಡಿದ ಅವರು, "ಏನೇ ಆದರೂ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಅವರ ನಿರ್ಧಾರವೇ ಅಂತಿಮ" ಎಂದರು.
"ನಾನು ಕೇವಲ ಒಂದು ಬಾರಿ ಶಾಸಕನಾದರೆ ಸಾಕು ಎಂದುಕೊಂಡಿದ್ದೆ. ಆದರೆ ಜನರ ಪ್ರೀತಿಯಿಂದ ಶಾಸಕ, ಉಪಮುಖ್ಯಮಂತ್ರಿ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗಿನ ರಾಜಕೀಯ ಜೀವನ ನನಗೆ ಪೂರ್ಣ ತೃಪ್ತಿ ನೀಡಿದೆ" ಎಂದು ಮೆಲುಕು ಹಾಕಿದರು.
ಇನ್ನು ಅರಸು ಅವರೊಂದಿಗಿನ ಹೋಲಿಕೆಗೆ ಪ್ರತಿಕ್ರಿಯಿಸಿದ ಅವರು, "ಅಂದಿನ ರಾಜಕಾರಣದ ಸಮಯವೇ ಬೇರೆ, ಇಂದಿನ ಸಮಯವೇ ಬೇರೆ. ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರು, ಅವರ ಹಾದಿಯಲ್ಲೇ ನಾವು ಸಾಗುತ್ತಿದ್ದೇವೆ" ಎಂದರು.
ರಾಜ್ಯದ ಹಲವೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಬೆಂಬಲಿಗರು 'ನಾಟಿ ಕೋಳಿ ಪಲಾವ್' ಹಂಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಯಾರು ತನ್ನ ಹೆಸರಿನಲ್ಲಿ ನಾಟಿ ಕೋಳಿ ಪಲಾವ್ ಹಂಚುತ್ತಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಈ ಬಗ್ಗೆ ನನ್ನ ಗಮನಕ್ಕೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. "ನಾನು ಹಳ್ಳಿಯಿಂದ ಬಂದವನು. ಸಹಜವಾಗಿ ನನಗೆ ನಾಟಿ ಕೋಳಿ ಊಟ ಅಂದರೆ ತುಂಬಾನೇ ಇಷ್ಟ ನನ್ನಂತೆಯೇ ಹಳ್ಳಿಯಿಂದ ಬಂದಿರುವ ಪ್ರತಿಯೊಬ್ಬರಿಗೂ ನಾಟಿ ಕೋಳಿ ಊಟದ ಮೇಲೆ ವಿಶೇಷ ಪ್ರೀತಿ ಇರುತ್ತದೆ, ಅಲ್ಲದೆ ನಾನು ಮೊದಲು ನಾಟಿ ಕೋಳಿ ತಿನ್ನುತ್ತಿದ್ದೆ ಆದರೆ ಆರೋಗ್ಯದ ಕಾರಣಕ್ಕೆ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಕಡಿಮೆ ಮಾಡಿದ್ದೇನೆ ಎಂದು ಹೇಳಿದರು.
ನಿನ್ನೆ ಮೈಸೂರಿನಲ್ಲಿ ನಡೆದ ಕೆ.ಸಿ. ವೇಣುಗೋಪಾಲ್ ಅವರ ಭೇಟಿಯ ಬಗ್ಗೆ ಮಾತನಾಡಿದ ಸಿಎಂ, "ಅವರು ವಯನಾಡಿನಿಂದ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗುತ್ತಿದ್ದರು. ಈ ಹಿನ್ನೆಲೆಯಲ್ಲಿ ನಾನು ಅವರನ್ನು ಸೌಜನ್ಯಯುತವಾಗಿ ಭೇಟಿಯಾಗಿದ್ದೇನೆಯೇ ಹೊರತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ," ಎಂದು ಸ್ಪಷ್ಟಪಡಿಸಿದರು.
ಬಳ್ಳಾರಿ ಘಟನೆ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅನಗತ್ಯವಾಗಿ ರಾಜಕಾರಣ ಮಾಡುತ್ತಿವೆ. ವಿರೋಧ ಪಕ್ಷಗಳು ಈ ವಿಚಾರವನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ ಎಂದು ಸಿಎಂ ಟೀಕಿಸಿದರು. ಅಲ್ಲದೆ ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಈ ಬಗ್ಗೆ ಬೆಂಗಳೂರಿಗೆ ತೆರಳಿದ ನಂತರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ. ಆ ನಂತರವೇ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 