ಕೊಪ್ಪಳ 16 : ದೇಶದ ಭವಿಷ್ಯವನ್ನು ಬರೆಯಲಿರುವ ಮಕ್ಕಳು ಅಭಿವೃದ್ದಿಯ ದೂರದೃಷ್ಟಿಯನ್ನಿಟ್ಟುಕೊಂಡು ಮತ್ತು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶಾಭಿವೃದ್ದಿಗೆ ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಕರೆ ನೀಡಿದರು.
ಅವರು 15ರಂದು ಕೊಪ್ಪಳ ಜಿಲ್ಲಾಡಳಿತ ವತಿಯಿಂದ 73ನೇ ಸ್ವಾತಂತ್ರೋತ್ಸವದ ದಿನಾಚರಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
1947 ಆಗಸ್ಟ್ 14 ರ ಮಧ್ಯರಾತ್ರಿ ಜವಾಹರ್ ಲಾಲ್ ನೆಹರು ಅವರು ಭಾರತೀಯ ರಾಜ್ಯಾಂಗವನ್ನು ಕುರಿತು 'ಭವಿಷ್ಯದೊಂದಿಗೆ ಅನುಸಂದಾನ' ಎನ್ನುವ ತಮ್ಮ ಐತಿಹಾಸಿಕ ಭಾಷಣದಲ್ಲಿ ಮಧ್ಯರಾತ್ರಿಯ ಗಂಟೆ ಬಾರಿಸುತ್ತಲೇ ಜಗತ್ತು ನಿದ್ರಿಸುತ್ತಿರುವ ವೇಳೆಯಲ್ಲಿ ಭಾರತ ಎಚ್ಚೆತ್ತು ಜೀವ ತಳೆಯುತ್ತದೆ, ಸ್ವತಂತ್ರವಾಗುತ್ತದೆ. ಇತಿಹಾಸದಲ್ಲಿ ಎಂದಾದರೂ ಒಮ್ಮೆ ಬರುವ ಮಹತ್ವದ ಘಳಿಗೆಯೊಂದುಂಟು. ಅಂತಹ ಘಳಿಗೆಯಲ್ಲಿ ಹಳತಿನಿಂದ, ದೀರ್ಘಕಾಲದಿಂದ ಅದುಮಿ ಹಿಡಿಯಲ್ಪಟ್ಟ ರಾಷ್ಟ್ರವೊಂದರ ಚೇತನ ನುಡಿಯ ತೊಡಗುತ್ತದೆ ಎಂದು ಹೇಳಿದ ಮಾತು ಇಂದಿಗೂ ದೇಶದಲ್ಲಿ ಅನುರಣಿಸುತ್ತಿದೆ ಎಂದರು.
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಳು ನಡೆದವು ಮಹಾತ್ಮ ಗಾಂಧೀಜಿಯವರು ಕೊಟ್ಟ ಸ್ವಾತಂತ್ರ್ಯ ಹೋರಾಟದ ಕೊನೆಯ ಕರೆ 'ಬ್ರಿಟಿಷರೇ ಭಾರತ ಬಿಟ್ಟು ತೊಲಗಿ', 'ಮಾಡು ಇಲ್ಲವೇ ಮಡಿಯಿರಿ'. ಈ ಸ್ವಾತಂತ್ರ್ಯ ಕಹಳೆಯ ಕರೆ ದೇಶದಲ್ಲೇ ದೊಡ್ಡ ಆಂದೋಲನಕ್ಕೆ ಕಾರಣವಾಯಿತು. ಸುಂಟರಗಾಳಿ ಬೀಸಿತು. ದೊಡ್ಡ ಸಂಗ್ರಾಮವೇ ನಡೆಯಿತು. ಸ್ವಾತಂತ್ರ್ಯಕ್ಕಾಗಿ ದುಡಿದವರು, ಮಡಿದವರು, ಲಕ್ಷಾಂತರ ಮಂದಿ. ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟ ಸ್ವಾತಂತ್ರ್ಯ ಹೋರಾಟಗಾರರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ. ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಮಹಾತ್ಮಾ ಗಾಂಧೀಜಿರವರು, ಬಾಲಗಂಗಾಧರ ತಿಲಕ್, ಗೋಪಾಲಕೃಷ್ಣ ಗೋಖಲೆ, ಜವಾಹರಲಾಲ್ ನೆಹರು, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಸುಭಾಷ್ಚಂದ್ರ ಭೋಸ್, ಭಗತ್ ಸಿಂಗ್, ಸದರ್ಾರ್ ವಲ್ಲಭಭಾಯಿ ಪಟೇಲ್ರವರು, ಲಾಲಬಹದ್ದೂರ್ ಶಾಸ್ತ್ರಿಯವರು ಹೀಗೆ ನಮ್ಮ ಅನೇಕ ರಾಷ್ಟ್ರೀಯ ಮಹಾಪುರುಷರು, ದೇಶ ಪ್ರೇಮಿಗಳು ತಮ್ಮ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು.
ಕೊಪ್ಪಳ ಜಿಲ್ಲೆಯು ಸ್ವಾತಂತ್ರ್ಯ ಹೋರಾಟಕ್ಕೆ ಅಮೂಲ್ಯ ಕಾಣಿಕೆ ಕೊಟ್ಟಿದೆ. ಮುಂಡರಗಿ ಭೀಮರಾಯರು, ಹಮ್ಮಿಗೆ ಕೆಂಚನಗೌಡರವರು ತೋರಿಸಿದ ದಿಟ್ಟತನ ಸ್ವಾತಂತ್ರ್ಯ ಹೋರಾಟಕ್ಕೆ ಅಮೂಲ್ಯ ಕೊಡುಗೆ ನೀಡಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ರಾಷ್ಟ್ರೀಯ ಮಹಾಪುರುಷರುಗಳ ಹೋರಾಟ, ತ್ಯಾಗ, ಬಲಿದಾನ ಹಾಗೂ ರಾಷ್ಟ್ರಪ್ರೇಮ ಚಿರಸ್ಮರಣೀಯ. ಅವರ ತ್ಯಾಗ ಬಲಿದಾನಗಳನ್ನು ಸ್ಮರಿಸಿಕೊಂಡು ಅವರಿಗೆ ನಮ್ಮ ನಿಮ್ಮೆಲ್ಲರ ಗೌರವಪೂರ್ವಕ ನಮನ ಹಾಗೂ ಕೃತಜ್ಞತೆಗಳನ್ನು ಈ ಶುಭ ಸಂದರ್ಭದಲ್ಲಿ ಅಪರ್ಿಸೋಣ ಎಂದು ಹೇಳಿದರು.
ನಮ್ಮ ದೇಶದ ಮಾಜಿ ರಾಷ್ಟ್ರಪತಿಗಳಾದ ದಿವಂಗತ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಇವರು, ದೇಶದ ರಕ್ಷಣೆ ಹಾಗೂ ಅಭಿವೃದ್ದಿ ಸಾಧಿಸುವುದಕ್ಕಾಗಿ ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧಿಸಿದ ಅಪ್ರತಿಮ ಸಾಧನೆಗಳೆ ನಮಗೆ ಸ್ಪೂತರ್ಿಯಾಗಿರುತ್ತವೆ. ಜೊತೆಗೆ, ಇವರ ಆಶಯವೂ ಸಹ ಇಂದಿನ ಮಕ್ಕಳೂ ದೇಶದ ಅಭಿವೃದ್ದಿಗೆ ಸಹಕಾರವಾಗಲಿ ಎನ್ನುವುದಾಗಿದ್ದು, ಇದಕ್ಕಾಗಿ ದೇಶದ ಮೂಲೆ ಮೂಲೆಗಳಲ್ಲಿರುವ ಶಾಲಾ ಕಾಲೇಜುಗಳಿಗೆ ತೆರಳಿ ತಮ್ಮ ಅನುಭವ ಹಾಗೂ ಜ್ಞಾನವನ್ನು ಹಂಚುತ್ತಾ, ದೇಶ ಸೇವೆಗೆ ಶ್ರಮಿಸಿರುತ್ತಾರೆ. ಇದನ್ನು ಮಕ್ಕಳಾಗಿರುವ ತಾವುಗಳು ಸಹ ಅರಿತು ಅವರ ಉತ್ತಮ ದೂರದೃಷ್ಠಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ದಿಗೆ ಶ್ರಮಿಸಬೇಕೆಂದು ಈ ಮೂಲಕ ಆಶಿಸುತ್ತೇನೆ.
ಈ ಬಾರಿ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಈ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಅವಧಿಗೂ ಮುನ್ನವೇ ಭತರ್ಿಯಾಗಿರುವುದು ಸಂತಸ ತಂದಿದೆ. ಈಗಾಗಲೇ ಕಾಲುವೆಗಳಿಗೆ ನೀರು ಹರಿಸಲಾಗಿದ್ದು, ತುಂಗಭದ್ರೆಯನ್ನು ಅವಲಂಬಿಸಿಕೊಂಡಿದ್ದ ರೈತರು ಈ ಬಾರಿ ನೆಮ್ಮದಿ ಕಾಣುವಂತಾಗಿದೆ. ಕುಡಿಯುವ ನೀರು, ಮೇವು ಪೂರೈಕೆಗೆ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಅತೀವೃಷ್ಟಿ ಮತ್ತು ಇನ್ನೂ ಕೆಲವು ಕಡೆಗಳಲ್ಲಿ ಅನಾವೃಷ್ಟಿ ತಲೆದೋರಿರುತ್ತದೆ. ಜಲಶಕ್ತಿ ಅಭಿಯಾನದಡಿ ಜಲ ಸಂರಕ್ಷಣೆ ಹಾಗೂ ಮಳೆ ನೀರು ಕೊಯ್ಲು, ಸಾಂಪ್ರಾದಾಯಿಕ ಜಲ ಮೂಲಗಳ ನವೀಕರಣ, ಜಲಾನಯನ ಅಭಿವೃದ್ಧಿ, ಕಲುಷಿತ ನೀರಿನ ಮರು ಬಳಕೆ ಮತ್ತು ಕೊಳವೆಭಾವಿ ಪುನಶ್ಚೇತನ, ತೀವ್ರ ಅರಣ್ಯೀಕರಣ ಹೀಗೆ ಈ ಐದು ವಿಧಗಳಿದ್ದು, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ನೀವು ಸಹ ನಿಮ್ಮ ನಿಮ್ಮ ಮನೆಗಳಲ್ಲಿ ಮಳೆ ನೀರು ಕೊಯ್ಲು ಯೋಜನೆಯನ್ನು ಅಳವಡಿಸಿಕೊಂಡು ಯಲಬುಗರ್ಾ ತಾಲೂಕು ಮಾತ್ರವಲ್ಲದೇ ಇಡೀ ಜಿಲ್ಲೆಯಾದ್ಯಂತ ಜಲಶಕ್ತಿ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಲು ತಾವು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ರವರು ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್.ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ ಮೂತರ್ಿ, ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ, ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ನಗರಾಭಿವೃದ್ದಿ ಕೋಶದ ಯೋಜನಾ ನಿದರ್ೇಶಕ ಎಂ.ಪಿ.ಮಾರುತಿ, ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಗಣ್ಯರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
73ನೇ ಸ್ವಾತಂತ್ರೋತ್ಸವದ ನಿಮಿತ್ಯ ಕೊಪ್ಪಳದ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕದ ದಳದಿಂದ ಆಕರ್ಷಕ ಪಥಸಂಚಲನ ಏರ್ಪಡಿಸಲಾಗಿದ್ದು 23 ವಿವಿಧ ತುಕಡಿಗಳು ಭಾಗವಹಿಸಿದ್ದವು ಜಿಲ್ಲೆಯ ಸ್ವಾತಂತ್ರ್ಯ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಉಂಟಾಗಿದ್ದು, ನೆರ ಸಂತ್ರಸ್ತರಿಗೆ ಜಿಲ್ಲೆಯ ಒಟ್ಟು 08 ಜನ ಸ್ವಾತಂತ್ರ್ಯ ಹೋರಾಟಗಾರರು ಸೇರಿ ತಮಗೆ ಬರುವ ಮಾಸಾಶನದಲ್ಲಿ 50,000 ಸಾವಿರ ರೂ.ಗಳನ್ನು ನೆರ ಸಂತ್ರಸ್ತರ ಪರಿಹಾರ ನಿಧಿಗೆ ನೀಡಿದರು.