ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲು ಕರೆ
Call to prioritize quality education for students
ತಾಳಿಕೋಟೆ 03 : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ-ಯುಕೆಜಿ) ಆಂಗ್ಲ ಮಾಧ್ಯಮ ಶಿಕ್ಷಣವನ್ನು ಆರಂಭಿಸಲಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ. ದಮ್ಮೂರಮಠ ಹೇಳಿದರು.
ಶಿವಪುರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರೌಢಶಾಲೆಯ ಸಹಯೋಗದೊಂದಿಗೆ ನೂತನ ವಿಭಾಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂಗ್ಲಿಷ್ ಮಾಧ್ಯಮದ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಗುಣಮಟ್ಟದ ಅಧ್ಯಯನ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಅವಕಾಶ ಸಿಗಲಿದೆ ಎಂದು ಅವರು ಹೇಳಿದರು.
ಮುಖ್ಯ ಶಿಕ್ಷಕಿ ಆರಬಿ ಆಲೂರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಹಲವು ಸೌಲಭ್ಯಗಳು ಲಭ್ಯವಿದ್ದು, ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು. ಪ್ರಸ್ತುತ 25 ಮಕ್ಕಳು ಎಲ್ಕೆಜಿ ಮತ್ತು 15 ಮಕ್ಕಳು ಯುಕೆಜಿಗೆ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 