ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಆಗ್ರಹಿಸಿ ಎಸ್‌ಯುಸಿಐ ಪಕ್ಷದಿಂದ ಜನವರಿ 30ರಂದು ಅಭಿಯಾನ
Campaign on January 30 by SUCI party demanding better quality of government hospitals
ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಆಗ್ರಹಿಸಿ ಎಸ್‌ಯುಸಿಐ ಪಕ್ಷದಿಂದ ಜನವರಿ 30ರಂದು ಅಭಿಯಾನ
ಧಾರವಾಡ 20: ಜಿಲ್ಲಾಸ್ಪತ್ರೆ, ಹುಬ್ಬಳ್ಳಿಯ ಕಿ?????ರ್‌ಐ ಸೇರಿದಂತೆ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸಲು ಅಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್, ಎಸ್.ಯು.ಸಿ.ಐ(ಸಿ) ಪಕ್ಷದಿಂದ ಇದೇ ಜನವರಿ 30ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಇಂದು ಧಾರವಾಡದ ಜಿಲ್ಲಾಸ್ಪತ್ರೆ ಎದುರು ಪ್ರಚಾರಾಂದೋಲನ ಹಾಗೂ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಬಡಿಗೇರ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ, ಕಿ?????ರ್‌ಐ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಕೂಪಗಳಾಗಿವೆ. ಅವಶ್ಯಕ ತಜ್ಞ ವೈದ್ಯರ, ದಾದಿಯರ ಮತ್ತಿತರ ಸಿಬ್ಬಂದಿಗಳ ಹಾಗೂ ಆಧುನಿಕ ಯಂತ್ರೋಪಕರಣಗಳ ಕೊರತೆಗಳಂತಹ ಸಮಸ್ಯೆಗಳು ನಿತ್ಯ ಬಾಧಿಸುತ್ತಿವೆ. ಸರ್ಕಾರಗಳಿಂದ ಬರಬೇಕಾದ ಆರ್ಥಿಕ ಅನುದಾನ ಬಂದಿಲ್ಲವೆಂದು ಬಿಪಿಎಲ್ ಕಾರ್ಡದಾರರಿಗೂ ಪ್ರತಿಯೊಂದಕ್ಕೂ ಶುಲ್ಕ ಹೇರಲಾಗಿದೆ. ಇನ್ನೊಂದೆಡೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ಹೊಸ ಚೀಟಿ ಮಾಡಿಸಲು, ತಪಾಸಣೆ, ಓಷಧಿಗಾಗಿ, ಹಣ ತುಂಬಲು ಹೀಗೆ ಪ್ರತಿಯೊಂದಕ್ಕೂ ದಿನವೀಡೀ ಪಾಳೆಯಲ್ಲಿ ನಿಲ್ಲುವ ಪರಿಸ್ಥಿತಿ ಇದೆ. ಇದರಿಂದಾಗಿ ತಪಾಸಣೆಗೆ ಬಂದ ದಿನವೇ ಸಂಪೂರ್ಣ ಚಿಕಿತ್ಸೆ ದೊರೆಯದಾಗಿದೆ. ರೋಗಿಗಳು ಸಣ್ಣಪುಟ್ಟ ರೋಗಗಳಿಗೂ ವಾರಗಟ್ಟಲೇ/ಹಲವಾರು ಬಾರಿ ಅಲೆದಾಡುವ ಪರಿಸ್ಥಿತಿ ಇದೆ. ಉತ್ತಮ ಗುಣಮಟ್ಟದ ಓಷಧಿಗಳೂ ಕೂಡ ಪೂರೈಕೆಯಾಗುತ್ತಿಲ್ಲ. ಇದಕ್ಕೆ ಬದಲಾಗಿ ಹೊರಗೆ ಬರೆದುಕೊಡುವ ಪರಿಪಾಟ ಹೆಚ್ಚುತ್ತಿದೆ. ಅವುಗಳನ್ನು ಕೊಳ್ಳುವ ಶಕ್ತಿ ನಮ್ಮ ಬಡಜನರಿಗಿದೆಯೇ? ಆದ್ದರಿಂದ ಕೂಡಲೇ ಈ ಸಮಸ್ಯೆಗಳನ್ನು ಪರಿಹರಿಸಬೇಕು. ಬಡವರ ಹಾಗೂ ಜನಸಾಮಾನ್ಯರಿಗೆ ಆರೋಗ್ಯ ಸುರಕ್ಷತೆಗಾಗಿ ಇರುವ ಸರ್ಕಾರಿ ಆಸ್ಪತ್ರೆಗಳನ್ನು ಉಳಿಸಲು, ಸಾರ್ವಜನಿಕ ಆರೋಗ್ಯ ಸೇವಾ ವ್ಯವಸ್ಥೆಯನ್ನು ಉತ್ತಮಪಡಿಸಲು ಹಾಗೂ ಬಲಪಡಿಸಲು ಆಗ್ರಹಿಸಿ ಜನವರಿ 30 ರಂದು ನಡೆಯುವ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಹೋರಾಟದಲ್ಲಿ ಭಾಗವಹಿಸುವವರು 9449448321 ಗೆ ಸಂಪರ್ಕಿಸಿ. ಈ ಸಂದರ್ಭದಲ್ಲಿ ಗಂಗಾಧರ ಬಡಿಗೇರ, ಮಧುಲತಾ ಗೌಡರ್, ಭವಾನಿಶಂಕರ ಗೌಡ, ಹನುಮೇಶ ಹುಡೇದ್, ಗಂಗೂಬಾಯಿ ಕೊಕರೆ, ರಣಜಿತ್ ದೂಪದ್, ಶಶಿಕಲಾ ಮೇಟಿ, ಪ್ರೀತಿ ಸಿಂಗಾಡಿ, ದುರ್ಗಪ್ಪ, ರುದ್ರಕಾಂತ್, ಅನುಸೂಯ ಮುಂತಾದವರು ಭಾಗವಹಿಸಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 