‘ಗ್ಯಾರಂಟಿ’ ಸಿಗದ ಫಲಾನುಭವಿಗಳಿಗೆ ಮತ್ತೆ ಅಭಿಯಾನದ ಭರವಸೆ

 ‘ಗ್ಯಾರಂಟಿ’ ಸಿಗದ ಫಲಾನುಭವಿಗಳಿಗೆ ಮತ್ತೆ ಅಭಿಯಾನದ ಭರವಸೆ Campaign promised again for beneficiaries who did not get 'guarantee'

 ‘ಗ್ಯಾರಂಟಿ’ ಸಿಗದ ಫಲಾನುಭವಿಗಳಿಗೆ ಮತ್ತೆ ಅಭಿಯಾನದ ಭರವಸೆ 

ಗದಗ 02: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ದೂರವಾಗಿರುವ ಅರ್ಹ ಕುಟುಂಬ ಗಳನ್ನು ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಸೇರಿಸಲು ರಾಜ್ಯದಲ್ಲೇ ಮೊದಲ ಬಾರಿಗೆ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ನೇತೃತ್ವದಲ್ಲಿ ಆರಂಭಿಸಲಾಗಿದ್ದ ವಿಶೇಷ ಅಭಿಯಾನ ಮತ್ತೆ ಮುಂದುವರಿಸಲಾಗಿದೆ. 

ವಿಶೇಷ ಅಭಿಯಾನದಲ್ಲಿ ಗೃಹಲಕ್ಷ್ಮೀ, ಗೃಹಜ್ಯೋತಿ, ಯುವ ನಿಧಿಗೆ ಹಾಗೂ ರೇಷನ್ ಕಾರ್ಡ್‌ ತಿದ್ದುಪಡಿಗೆ ಅರ್ಜಿಗಳು ಸೇರಿ ಒಂದೇ ದಿನದಲ್ಲಿ ಒಟ್ಟು 150ಕ್ಕೂ ಅಧಿಕ ಅರ್ಜಿಗಳು ಸ್ವೀಕೃತಗೊಂಡಿವೆ.  

ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಗದಗ ತಾಲೂಕಿನಲ್ಲಿ ಶೇ. 98ಕ್ಕೂ ಅಧಿಕ ಕುಟುಂಬಗಳು ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗಪಡಿಸಿಕೊಂಡಿದ್ದರು. ಉಳಿದ ಅರ್ಹ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ಸೇರಿಸಲು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರ ಸಲಹೆಯಂತೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.  

ಈ ವಿಶೇಷ ಅಭಿಯಾನದಲ್ಲಿ ಪಂಚ ಗ್ಯಾರಂಟಿಗಳ ಯೋಜನೆ ವಂಚಿತ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿರುವುದು ಸಂತಸವಾಗಿದ್ದು, ತಾಲೂಕಿನಲ್ಲಿ ಶೇ. 100ಕ್ಕೆ 100ರಷ್ಟು ಅರ್ಹ ಫಲಾನುಭವಿಗಳು ಪಂಚ ಗ್ಯಾರಂಟಿಯಿಂದ ದೂರ ಉಳಿಯಬಾರದು ಎಂಬುದು ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೊಂದು ದಿನ ನಿಗದಿಪಡಿಸಿ ಮತ್ತೊಮ್ಮೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.  

ಸಚಿವ ಎಚ್‌.ಕೆ. ಪಾಟೀಲ ಮೆಚ್ಚುಗೆ: ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದಗ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಈವರೆಗೂ ಉಪಯೋಗ ಪಡೆಯದ ಫಲಾನುಭವಿಗಳಿಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಸೇರದ 150ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಸೇರೆ​‍್ಡಗೊಳಿಸಿರುವುದು ಮಾದರಿಯಾಗಿದ್ದು, ಇದೇ ಮಾದರಿಯಲ್ಲಿ ಗ್ರಾಮ, ಹೋಬಳಿ, ವಾರ್ಡ್‌ ಮಟ್ಟದಲ್ಲಿ ಅಭಿಯಾನ ಹಮ್ಮಿಕೊಂಡು ರಾಜ್ಯದಲ್ಲಿ 100ಕ್ಕೆ 100ರಷ್ಟು ಅರ್ಹ ಫಲಾನುಭವಿಗಳನ್ನು ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಸೇರಿಸಬಹುದಾಗಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಅವರು ಅಭಿಯಾನದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿ, ಬೆಂಬಲಿಸಿದ್ದಾರೆ. 

ಈ ಸಂದರ್ಭದಲ್ಲಿ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಕೃಷ್ಣಗೌಡ ಎಚ್‌. ಪಾಟೀಲ, ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ದಯಾನಚಿದ ಪವಾರ, ಸಂಗಮೇಶ ಕೆರಕಲಮಟ್ಟಿ, ಎನ್‌.ಬಿ. ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪೂರ, ಮಲ್ಲಪ್ಪ ದಂಡಿನ ಚಿಂಚಲಿ, ಗ್ಪಣೇಶಸಿಂಣ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾಸಾಬ ಮಲ್ಲಸಮುದ್ರ, ತಾಲ್ಲೂಕು ಸಮಿತಿ ಸದಸ್ಯ ಕಾರ್ಯದರ್ಶಿ ಆಗಿರುವ ಗದಗ ತಾಪಂ ಇಒ ಮಲ್ಲಯ್ಯ ಕೊರವನವರ ಸೇರಿ ಹಲವರಿದ್ದರು.