ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಅಭಿಯಾನ
Campaign to bring out-of-school children back to school
ಶಿಗ್ಗಾವಿ 01: ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ ನಂ.2ಕ್ಕೆ ಹಾಜರಾಗದೇ ಇರುವ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಪಾಲಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಅಭಿಯಾನದ ನಂತರ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮತ್ತೆ ಶಿಕ್ಷಣದ ಹಾದಿಗೆ ತರಲು ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕೈಗೊಂಡ ಈ ಪ್ರಯತ್ನಕ್ಕೆ ಪಾಲಕರು ಸಹಕಾರ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಮುಕ್ತಿಯಾರ್ ಖಾನ್ ತಿಮ್ಮಾಪುರ, ಶಿಕ್ಷಕರಾದ ಆರ್.ಎಚ್. ಕೊಪ್ಪದ, ಸುಮ್ಮಾ ಆರ್., ಎಸ್ಡಿಎಂಸಿ ಅಧ್ಯಕ್ಷೆ ಆಸ್ಮಾಬಾನು ನುಲ್ವಿ, ಎಸ್ಡಿಎಂಸಿ ಸದಸ್ಯೆ ಬಿಬಿ ಅಸ್ಲಾ ದರ್ಗಾವಾಲೆ, ಹೀನಾ ಕೌಸರ್ ಸೇರಿದಂತೆ ಪಾಲಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 