ಕ್ಯಾಂಪಸ್ ಸಂದರ್ಶನ: ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿನ 19 ವಿದ್ಯಾರ್ಥಿಗಳ ಆಯ್ಕೆ

ಕ್ಯಾಂಪಸ್ ಸಂದರ್ಶನ: ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿನ 19 ವಿದ್ಯಾರ್ಥಿಗಳ ಆಯ್ಕೆ  Campus Interview: 19 Students Selected from BLDE Engineering College


ವಿಜಯಪುರ, ಸೆ. 23: ಎಕೆಎಸ್ ಏರೋಸ್ಪೇಸ್ ಸಂಸ್ಥೆಯು ಸೆಪ್ಟೆಂಬರ್ 10 ಮತ್ತು 11ರಂದು ನಗರದಲ್ಲಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ನಗರದ ಬಿಎಲ್ಡಿಇ ಸಂಸ್ಥೆಯ ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ 19 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  

ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 280 ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ಈ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು.

ಅವರಲ್ಲಿ 19 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಆಯ್ಕೆಯಾದ ಎಲ್ಲರೂ ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿರುವುದು ಗಮನಾರ್ಹವಾಗಿದೆ.  

ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳನ್ನು ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ, ಬಿಎಲ್ಡಿಇ ಡೀಮ್ಡ್‌ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಆರ್‌.ವಿ. ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಪಿ. ಹಾಗೂ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ರಮೇಶ ಜಿರಗಾಳ ಅಭಿನಂದಿಸಿದ್ದಾರೆ.  

ಕ್ಯಾಂಪಸ್ ಸಂದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ದೊರೆತಿರುವುದು ಕಾಲೇಜಿನ ಶೈಕ್ಷಣಿಕ ಹಾಗೂ ತರಬೇತಿ ಚಟುವಟಿಕೆಗಳಿಗೆ ಉತ್ತೇಜನ ನೀಡಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.