ಬೆಳಗಾವಿಯಲ್ಲಿ ಕಾರು ಡಿಕ್ಕಿ : 13 ದ್ವಿಚಕ್ರ ವಾಹನಗಳು ಜಖಂ
Car collision in Belgaum: 13 two-wheelers injured
ಬೆಳಗಾವಿ 27: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳ ಮೇಲೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು 13 ಬೈಕಗಳು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಬೆಳಗಾವಿ ಗಾಂಧಿ ನಗರದ ಖಾಸಗಿ ಆಸ್ಪತ್ರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ನಗರದ ಖಾಸಗಿ ಆಸ್ಪತ್ರೆ ಎದುರು ದ್ವಿಚಕ್ರ ವಾಹನಗಳ ನಿಲುಗಡೆ ಸ್ಥಳದಲ್ಲಿ ರೋಗಿಗಳ ಸಂಬಂಧಿಕರು ಬೈಕಗಳನ್ನು ನಿಲುಗಡೆ ಮಾಡಿದ್ದರು. ಶುಕ್ರವಾರ ರಾತ್ರಿ ಮಹಾಂತೇಶ ನಗರದಿಂದ ವೇಗವಾಗಿ ಬಂದ ಬುಲೇರೋ ಕಾರು ನಿಯಂತ್ರಣ ತಪ್ಪಿ ಖಾಸಗಿ ಆಸ್ಪತ್ರೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಮೇಲೆ ಹರಿದಿದೆ.
ಈ ಘಟನೆಯಿಂದ ಆರು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಾಕಿ ಏಳು ದ್ವಿಚಕ್ರ ವಾಹನಗಳು ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿವೆ. ಕಾರಿನ ಚಾಲಕ ಕುಡಿದು ವಾಹನ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಟ್ರಾಫಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 