ಬಾರ್ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ; ಸಂಪೂರ್ಣ ಜಖಂಗೊಂಡ ವಾಹನ
Car parked in front of a bar explodes; vehicle completely wrecked
ಜಮಖಂಡಿ 26 : ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ತಡರಾತ್ರಿ ಬಾರ್‌ವೊಂದರ ಮುಂದೆ ನಿಲ್ಲಿಸಿದ್ದ ಕಾರೊಂದು ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಿಪ್ಪರಗಿ ಗ್ರಾಮದ ಯುವರಾಜ್ ಬಾರ್ ಎದುರು ನಿಲ್ಲಿಸಲಾಗಿದ್ದ ಎಕ್ಸ್‌ಯುವಿ 300 (ಘಿಗಗಿ 300) ಕಾರು ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕಾರಿನ ಬಿಡಿಭಾಗಗಳು ಸುಮಾರು 1 ರಿಂದ 3-4 ಸಾವಿರ ಅಡಿ ದೂರದವರೆಗೆ ಚದುರಿ ಬಿದ್ದಿವೆ ಎನ್ನಲಾಗಿದೆ. ಕಾರುಗಳ ಟೈರ್, ಬ್ಯಾಟರಿ, ಗಾಜು, ಕಬ್ಬಿಣದ ಭಾಗಗಳು ಸೇರಿದಂತೆ ಹಲವು ವಸ್ತುಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿದ್ದಿದ್ದು, ಕೆಲವು ವಸ್ತುಗಳು ಗಿಡಗಂಟೆಗಳಲ್ಲಿಯೂ ಪತ್ತೆಯಾಗಿವೆ. ಸ್ಫೋಟದ ಭಾರೀ ಶಬ್ದಕ್ಕೆ ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳು ಪುಡಿಯಾಗಿದ್ದು, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಫೋಟಗೊಂಡ ಕಾರು ಯುವರಾಜ್ ಬಾರ್ ನಡೆಸುತ್ತಿದ್ದ ಹನುಮಂತ ಅಥಣಿ ಅವರಿಗೆ ಸೇರಿದ್ದು ಎನ್ನಲಾಗಿದೆ. ತಡರಾತ್ರಿ ಬಾರ್ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ನಾಶವಾಗಿದೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಡಿವೈಎಸ್ಪಿ ಸೈಯದ್ ರೋಷನ್ ಜಮೀರ್, ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್‌ಐ ಗಂಗಾಧರ ಪೂಜಾರಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಇದರೊಂದಿಗೆ ಎಎಕ್ಸ್‌ಇ ತಂಡ, ಬಾಂಬ್ ನಿಷ್ಕ್ರಿಯ ದಳ , ಬೆರಳಚ್ಚು ತಜ್ಞರು, ನ್ಯಾಯ ವಿಜ್ಞಾನ ಪ್ರಯೋಗಾಲಯ ತಂಡ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿವೆ. ಕಾರಿನ ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಬಾಂಬ್ ಸ್ಫೋಟವೇ ಅಥವಾ ಕಾರಿನಲ್ಲಿನ ತಾಂತ್ರಿಕ ದೋಷದಿಂದ ಸಂಭವಿಸಿದ ಘಟನೆಯೇ ಎಂಬುದು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 