ಉತ್ತಮ ಬಸ್ ನಿಲ್ದಾಣಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ವಿತರಣೆ
Cash prizes and certificates of appreciation distributed to the best bus stations
ಉತ್ತಮ ಬಸ್ ನಿಲ್ದಾಣಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ವಿತರಣೆ
ಹುಬ್ಬಳ್ಳಿ 29: ದಿನಾಂಕ: 28-07-2025 ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ, ಮೇ ಮತ್ತು ಜೂನ್-2025 ರ ಮಾಹೆಗಳಲ್ಲಿ “ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ಯಾಣ" ಎಂಬ ಶೀರ್ಷಿಕೆಯಡಿಯಲ್ಲಿ ಕೈಗೊಂಡ ಅಭಿಯಾನದಲ್ಲಿ ಪ್ರಯಾಣಿಕರು, ತನಿಖಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಬಸ್ ನಿಲ್ದಾಣಗಳ ಸ್ವಚ್ಛತೆ ಹಾಗೂ ನಿರ್ವಹಣೆ ಕುರಿತು ನೀಡಿರುವ ಈಜಜಜಛಚಿಛಿಞ ಫೀಡ್ ಬುಕ್ ಆಧಾರದ ಮೇಲೆ ಹಾಗೂ ವಾಸ್ತವಿಕವಾಗಿ ಪರೀಶೀಲನೆ ಮಾಡಿ ಬಸ್ ನಿಲ್ದಾಣಗಳನ್ನು ಉತ್ತಮ ನಿರ್ವಹಣೆ ಕೈಗೊಂಡಿರುವ ಬಸ್ ನಿಲ್ದಾಣಗಳೆಂದು ಆಯ್ಕೆ ಮಾಡಿ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ.ಎಂ ಭಾ.ಆ.ಸೇ ರವರು ನಿಲ್ದಾಣಗಳ ಮೇಲ್ವಿಚಾರಕ ಸಿಬ್ಬಂದಿಗಳಿಗೆ ನಗದು ಪುರಸ್ಕಾರ ಹಾಗೂ ಪ್ರಶಂಸನಾ ಪತ್ರವನ್ನು ಪ್ರದಾನ ಮಾಡಿ ಅಭಿನಂದಿಸಿ, ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸುವ ಜವಾಬ್ದಾರಿ ನಮ್ಮದಾಗಿರುತ್ತದೆ. ಇದೊಂದು ವಿನೂತನ ಪ್ರಯೋಗವಾಗಿದ್ದು, ಪ್ರಯಾಣಿಕರಿಗೆ ಒಳ್ಳೆಯ ಪ್ರಯಾಣದ ಅನುಭವ ನೀಡಲು ಸಹಕಾರಿಯಾಗಿರುತ್ತದೆ. ಬಸ್ ನಿಲ್ದಾಣಗಳಲ್ಲಿ ನಮ್ಮ ಸಿಬ್ಬಂದಿಗಳು ಹೇಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಮತ್ತು ಅವರ ನಡತೆ ಹೇಗೆ ಎಂದು ಪ್ರಯಾಣಿಕರು ಗಮನಿಸುತ್ತಾ ಇರುತ್ತಾರೆ. ಆದ್ದರಿಂದ, ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳನ್ನು ಸ್ಚಚ್ಚವಾಗಿಟ್ಟುಕೊಳ್ಳುವದು ನಮ್ಮ ಕರ್ತವ್ಯ ಎಂದರು. ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ಕಿವಿ ಮಾತನ್ನು ಹೇಳಿದರು. ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆಯನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಿದರು.
ಮುಖ್ಯ ಸಂಚಾರ ವ್ಯವಸ್ಥಾಪಕರಾದ ವಿವೇಕಾನಂದ ವಿಶ್ವಜ್ಞ, ಪ್ರಾಸ್ತಾವಿಕವಾಗಿ ಮಾತನಾಡಿ ಮಾನ್ಯ ವ್ಯವಸ್ಥಾಪಕರ ಆದೇಶದ ಮೇರೆಗೆ ಈ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರಯಾಣಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಸಿ ಉತ್ತಮ ನಿರ್ವಹಣೆ ಕೈಗೊಂಡಿರುವ ಬಸ್ ನಿಲ್ದಾಣಗಳ ಮೇಲ್ವಿಚಾರಕ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಾದ ಶ್ರೀನಾಥ.ಜಿ, ಕೆ.ಎಲ್.ಗುಡೆನ್ನವರ, ರವಿ ಅಂಚಿಗಾವಿ, ನವೀನಕುಮಾರ ತಿಪ್ಪಾ, ಜಿ.ಹನುಮನಗೌಡ, ಮತ್ತು ಇನ್ನಿತರ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನವೀನಕುಮಾರ ತಿಪ್ಪಾ ನಿರೂಪಸಿ, ಕೆ.ಎಲ್.ಗುಡೆನ್ನವರ ವಂದಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 